Site icon PowerTV

ಆಧ್ಯಾತ್ಮ ಬಿಟ್ಟು ಹೋದ್ರೆ ಸರ್ಕಾರಕ್ಕೆ ದೈವವೇ ಉತ್ತರ ನೀಡಲಿದೆ : ಕೋಡಿ ಮಠ ಶ್ರೀ

ಕೋಲಾರ : ನಾನು ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಹೇಳಿದ್ದಾರೆ.

ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಶ್ರೀ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಮತ್ತೆ ಕೈವಾರ ತಾತಯ್ಯನವರು ಹುಟ್ಟಿ ಬರುವ ಸಂಕೇತ ಇದೆ. ಅಂತಹ ಸೂಚನೆ ನಮಗೆ ಸಿಕ್ಕಿದೆ. ಅದರಂತೆ ಬೆಟ್ಟದಲ್ಲಿ ಮೂನ್ಸೂಚನೆ ಸಿಕ್ಕಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಆಧ್ಯಾತ್ಮಿಕವಾಗಿ ರಾಜ್ಯ ಸರ್ಕಾರ ನಡೆಯುತ್ತಿದೆ. ಇದರಿಂದ (ಕಾಂಗ್ರೆಸ್ ಸರ್ಕಾರ) ಅವರಿಗೆ ಒಳ್ಳೆಯದಾಗಲಿ. ಆಧ್ಯಾತ್ಮ ಬಿಟ್ಟು ಹೋದರೆ ಸರ್ಕಾರಕ್ಕೆ ದೈವವೇ ಉತ್ತರ ನೀಡಲಿದೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ : ರಾಜ್ಯ ಸರ್ಕಾರ ಅಳಿವು ಉಳಿವು ಬಗ್ಗೆ ಕೋಡಿ ಶ್ರೀ ಭವಿಷ್ಯ.!

ಇನ್ನೊಂದು ಗಂಡಾಂತರ ಕಾದಿದೆ

ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತದೆ ಎಂದು ನಾನು ಹೇಳಿದ್ದೆ. ಅದರಂತೆ ಒಡಿಶಾದ ಬಹನಾಗಾ ರೈಲು ನಿಲ್ದಾಣದ ಭೀಕರ ರೈಲು ದುರಂತ ನಡೆದಿದೆ. ದೇಶಕ್ಕೆ ಇನ್ನೂ ಒಂದು ಗಂಡಾಂತರ ಕಾದಿದೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಈ ವರ್ಷ ಅಚಾನಕ್ಕಾಗಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸಾಧ್ಯಯೆಯಿದೆ. ಎರಡು ಅಥವಾ ಮೂರು ರಾಷ್ಟ್ರಗಳು ನೀರಿನಲ್ಲಿ ಮುಳುಗಲಿವೆ. ಎಲ್ಲೋ ನಡೆದ ಬಾಂಬ್ ದಾಳಿಯಿಂದ ನಮಗೆ ಸಾಕಷ್ಟು ಅನಾಹುತ ಸಂಭವಿಸಲಿದೆ ಎಂದು ಮತ್ತೊಂದು ಬಿಗ್ ಶಾಕ್ ಕೊಟ್ಟಿದ್ದಾರೆ.

Exit mobile version