Sunday, August 24, 2025
Google search engine
HomeUncategorizedಮುಖ್ಯಮಂತ್ರಿ ಕುರ್ಚಿ ಸುಖದ ಸುಪ್ಪತ್ತಿಗೆ ಅಲ್ಲ : ಸಿದ್ದರಾಮಯ್ಯ

ಮುಖ್ಯಮಂತ್ರಿ ಕುರ್ಚಿ ಸುಖದ ಸುಪ್ಪತ್ತಿಗೆ ಅಲ್ಲ : ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಕುರ್ಚಿ ಎಂದರೆ ಸುಖದ ಸುಪ್ಪತ್ತಿಗೆ ಅಲ್ಲ. ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ವರುಣಾ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ನಡೆದ ಕೃತಜ್ಞತಾ ಸಮರ್ಪಣಾ ಸಭೆಯನ್ನು ಉದ್ಘಾಟಿಸಿ, ಸಾರ್ವಜನಿಕರನ್ನುದ್ದೇಶಿ ಮಾತನಾಡಿದರು.

ಇದು ನನ್ನ ಕೊನೆ ಚುನಾವಣೆ. ಆದರೆ, ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ. ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಕಾರಣಕ್ಕಾಗಿ ನಾಡಿನ ಜನತೆಗೆ ನಾನು ಕೃತಜ್ಞ ಎಂದು ಹೇಳಿದರು.

ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ಮಾದರಿಯನ್ನಾಗಿ ಇಟ್ಟುಕೊಂಡು, ನಾನು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೆ. ನುಡಿದಂತೆ ನಡೆದಿದ್ದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ : ನಾನು ರಾಜ್ಯದ ಉದ್ದಗಲಕ್ಕೂ ಸಂಚಾರ ಮಾಡುತ್ತೇನೆ : ಹೆಚ್.ಡಿ ಕುಮಾರಸ್ವಾಮಿ

ನಾಡಿಗೆ ಕಲ್ಯಾಣ ಕಾರ್ಯಕ್ರಮ ನೀಡುತ್ತೇವೆ

2013ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೋದಿಗೆ ಅಭಿವೃದ್ಧಿ ಬೇಕಾಗಿಲ್ಲ

ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ಗ್ಯಾರಂಟಿಗಳು ಜಾರಿ ಆಗುವುದಿಲ್ಲ. ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ನಾವು ಈಗ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಬಡವರು, ಮಧ್ಯಮ ವರ್ಗದವರ ಪರವಾದ ಯೋಜನೆ ಘೋಷಿಸಿದಾಗ ಪ್ರಧಾನಿ ಮೋದಿಯವರು ಜನರಿಗೆ ಅನುಕೂಲ ಮಾಡುವ ನಮ್ಮ ಯೋಜನೆಗೆ ತಮ್ಮ ಸಹಕಾರ ನೀಡಬೇಕಿತ್ತು. ಆದರೆ, ಮೋದಿ ಅವರಿಗೆ ಬಡವರು, ಮಧ್ಯಮ ವರ್ಗದವರ ಪ್ರಗತಿ, ಅಭಿವೃದ್ಧಿ ಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments