Site icon PowerTV

ಇಂದು ಉಚಿತ ಬಸ್ ಪ್ರಯಾಣಕ್ಕೆ ಚಾಲನೆ : ಈ ನಿಯಮಗಳನ್ನು ಪಾಲಿಸಬೇಕು

ಬೆಂಗಳೂರು : ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಉಚಿತ ಬಸ್ ಪ್ರಯಾಣಕ್ಕೆ (ಶಕ್ತಿ ಯೋಜನೆ) ಹಸಿರು ನಿಶಾನೆ ದೊರೆಯಲಿದೆ. ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆ ಟಿಕೆಟ್ ಹಾಗೂ ಲೋಗೋ ಅನಾವರಣಗೊಳಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಬೆಂಗಳೂರು ವಿಭಾಗದ ಶಾಸಕರು, ಸಂಸದರು ಉಪಸ್ಥಿತರಿರುವರು. ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದ್ದಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ುಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಲಾಗುವುದು.

ಮಧ್ಯಾಹ್ನ 1 ಗಂಟೆ ಬಳಿಕ ಬಿಎಂಟಿಸಿ, ಕೆಎಸ್ಆರ್ಟಿಸಿ, ಎನ್ ಡಬ್ಲ್ಯೂಆರ್ಟಿಸಿ, ಕೆಕೆಆರ್ಟಿಸಿ ಬಸ್​ಗಳಲ್ಲಿ‌ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು.

ಇದನ್ನೂ ಓದಿ : ಬಸ್ ಪ್ರಯಾಣ ಫ್ರೀ.. ಆದ್ರೆ, ಲಗೇಜ್ ಗೆ ದುಡ್ಡು ಕೊಡಬೇಕು : ಬಿಎಂಟಿಸಿ ಎಂ.ಡಿ ಸತ್ಯವತಿ

ನಿಯಮಗಳು ಅನ್ವಯ

Exit mobile version