Site icon PowerTV

2.5 ಲಕ್ಷ ಖಾಲಿ ಹುದ್ದೆ ಭರ್ತಿಗೆ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಐದು ಉಚಿತ ಗ್ಯಾರಂಟಿ ಯೋಜನೆ ಜಾರಿಯ ಜೊತೆಗೆ ಕಾಂಗ್ರೆಸ್ ಸರ್ಕಾರ ರಾಜ್ಯದ ಯುವಜನತೆಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ.

ಕಲಬುರ್ಗಿಯಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಕಿದೆ ಎಂದು ಹೇಳಿದ್ದಾರೆ.

ದೇಶ ಕಟ್ಟುವ ಮುನ್ನ ಮನೆಯಲ್ಲಿನ ಆರ್ಥಿಕ ಸ್ಥಿರತೆ ಸರಿಯಾಗಿ ಇರಬೇಕು. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. 40% ಸರ್ಕಾರ ರಾಷ್ಟ್ರಮಟ್ಟದಲ್ಲಿ ದೊಡ್ಡಮಟ್ಟದ ಸದ್ದು ಮಾಡಿತ್ತು. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : 40+5=45 ಪರ್ಸೆಂಟ್ ಕೊಟ್ರೆ ಹಣ ಬಿಡುಗಡೆ ಮಾಡ್ತಾರಂತೆ: ಹೆಚ್.ಡಿ ಕುಮಾರಸ್ವಾಮಿ 

ಆರ್ಥಿಕ ದಿವಾಳಿ ಮಾಡಿದ್ದೇ ಬಿಜೆಪಿ

ಇಡೀ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದು ಇದೇ ಬಿಜೆಪಿ. ಅದಾನಿ, ನಿರವ್ ಮೋದಿ ಸೇರಿದಂತೆ ಅನೇಕರ ಸಾವಿರಾರು ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ. ಈ ಹಿಂದೆಯು ನುಡಿದಂತೆ ನಡೆದಿದ್ದೇವೆ. ಇಂದೂ ನುಡಿದಂತೆ ನಡೆಯುತ್ತೇವೆ, ಅನುಮಾನ ಬೇಡ. ಐದು ಗ್ಯಾರಂಟಿಗಳು ಜನರ ಆರ್ಥಿಕ ಬುನಾದಿ ಗಟ್ಟಿ ಮಾಡಲು ಸಹಕಾರಿಯಾಗಲಿವೆ ಎಂದು ಭರವಸೆ ನೀಡಿದ್ದಾರೆ.

10 ಅಂಶಗಳ ಕಾರ್ಯಕ್ರಮ ಜಾರಿ

ಐದು ಉಚಿತ ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನರ ಆರ್ಥಿಕ ಸ್ಥಿರತೆ ನಿರ್ಮಾಣ ಮಾಡಲಾಗುವುದು. ಪಕ್ಷದ ಪ್ರಣಾಳಿಕೆಗಳನ್ನು ಹಾಗೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ 10 ಅಂಶಗಳ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಅವುಗಳನ್ನೂ ಜಾರಿಗೊಳಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Exit mobile version