Site icon PowerTV

‘ರಾಜಿ’ಕಾರಣ ನಮ್ಮ ಪಕ್ಷದಲ್ಲಿಯೂ ಇದೆ ; ಪ್ರತಾಪ್ ಸಿಂಹ

ಬೆಂಗಳೂರು: ನಮ್ಮ ಪಕ್ಷದ ಕೆಲವು ಹಿರಿಯ ನಾಯರು ಕಾಂಗ್ರೆಸ್​ ಸರ್ಕಾರದ ಜೊತೆಗೆ ಷಾಮೀಲಾಗಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ

ಹೌದು, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿಯ ಕೆಲವು ಹಿರಿಯ ನಾಯಕರು ಒಂದೇ ಒಂದು ಮಾತನ್ನೂ ಆಡುತ್ತಿಲ್ಲ. ಸಿದ್ದರಾಮಯ್ಯನವರ ಜೊತೆಗೆ ಬಿಜೆಪಿಯ ಹಿರಿಯ ನಾಯಕರು ಷಾಮೀಲಾಗಿರುವ ಸಾಧ್ಯತೆಗಳಿವೆ ಎಂದು ಅವರು ಆರೋಪಿಸಿದ್ದಾರೆ.

ಇನ್ನೂರಾಜ್ಯದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಹೊಂದಾಣಿಕೆ ಮಾಡಿಕೊಂಡಿದ್ದಾರೆ.ತಮ್ಮ ಪಕ್ಷದ ಹಿರಿಯ ನಾಯಕರ ವಿರುದ್ಧವೇ ಪ್ರತಾಪ್ ಸಿಂಹ ಘರ್ಜಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

“ನೀವು (ಕಾಂಗ್ರೆಸ್) ಅಧಿಕಾರಕ್ಕೆ ಬಂದ ತಕ್ಷಣ ನಮ್ಮವರನ್ನು ಹೆದರಿಸುತ್ತೀರಿ. ನಮ್ಮವರು ಅಧಿಕಾರಕ್ಕೆ ಬಂದ ತಕ್ಷಣ ನಿಮ್ಮವರನ್ನು ಹೆದರಿಸುತ್ತಾರೆ. ಇದೆಲ್ಲವೂ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ಇರಬಹುದೇ’’ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

 

Exit mobile version