Site icon PowerTV

Gruha Jyothi Scheme: ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

ಬೆಂಗಳೂರು: ನಾಳೆಯಿಂದ ಶುರುವಾಗಬೇಕಿದ್ದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಹೌದು,ಗೃಹಜ್ಯೋತಿ(Gruha Jyothi Scheme) ಯೋಜನೆಗೆ ಅರ್ಜಿ ಸಲ್ಲಿಕೆಯೂ ಜೂನ್​ 15ರಿಂದ ಶುರುವಾಗಬೇಕಿತ್ತು ಅಂದ್ರೆ   ಕೆಲವು ತಾಂತ್ರಿಕ ದೋಷದಿಂದಾಗಿ ಅರ್ಜಿ ಸಲ್ಲಿಕೆಯನ್ನ ಜೂನ್​ 18ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ ಉಚಿತ ನೀಡುವ ಗೃಹಜ್ಯೋತಿ(Gruha Jyothi Scheme) ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಗೆ ಜೂನ್ 18 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ.

ರಾಜ್ಯದಲ್ಲಿ 200 ಯೂನಿಟ್‌ ಉಚಿತ ವಿದ್ಯುತ್‌ ಪಡೆಯುವ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಹೇಳಿದ್ದರು. ಅದರಂತೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ ಆಗಬೇಕಿತ್ತು. ಆದ್ರೆ, ಕೆಲ ತಾಂತ್ರಿಕ ದೋಷದಿಂದಾಗಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಲಾಗಿದೆ.

Exit mobile version