ಬೆಂಗಳೂರು : ಸಂವಿಧಾನದ ಪ್ರಸ್ತಾವನೆ ಓದಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಚಿವ ಡಾ.ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಾಥಮಿಕ ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ ಇನ್ನು ಮುಂದೆ ನಾಡ ಗೀತೆ ಮತ್ತು ರಾಷ್ಟ್ರಗೀತೆಯ ಜೊತೆಗೆ ಸಂವಿಧಾನದ ಪ್ರಸ್ತಾವನೆಯನ್ನೂ ಕೂಡಾ ಕಡ್ಡಾಯವಾಗಿ ಓದಬೇಕು ಎಂದು ಹೇಳಿದ್ದಾರೆ.
ಈ ಸಂಬಂಧ ಕ್ಯಾಬಿನೆಟ್ ಸಭೆಯಲ್ಲಿ ಅಧಿಕೃತ ಅನುಮೋದನೆ ದೊರೆತಿರುತ್ತದೆ ಎಂದು ಈ ಮೂಲಕ ತಮಗೆ ತಿಳಿಯಪಡಿಸಲು ಇಚ್ಛಿಸುತ್ತೇನೆ. ಕೋಮು ಶಕ್ತಿಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಹೆಚ್ಚು ಸಕ್ರಿಯರಾಗಿದೆ ಎಂದು ತಿಳಿಸಿದ್ದಾರೆ.
ಪ್ರಾಥಮಿಕ ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ ಇನ್ನು ಮುಂದೆ ನಾಡ ಗೀತೆ ಮತ್ತು ರಾಷ್ಟ್ರಗೀತೆಯ ಜೊತೆಗೆ ಸಂವಿಧಾನದ ಪ್ರಸ್ತಾವನೆಯನ್ನೂ ಕೂಡಾ ಕಡ್ಡಾಯವಾಗಿ ಓದಬೇಕೆಂಬ ವಿಷಯಕ್ಕೆ ಕ್ಯಾಬಿನೆಟ್ ಸಭೆಯಲ್ಲಿ ಅಧಿಕೃತ ಅನುಮೋದನೆ ದೊರೆತಿರುತ್ತದೆ ಎಂದು ಈ ಮೂಲಕ ತಮಗೆ ತಿಳಿಯಪಡಿಸಲು ಇಚ್ಛಿಸುತ್ತೇನೆ
1/2 pic.twitter.com/MGcUulGswR
— Dr H C Mahadevappa(Buddha Basava Ambedkar Parivar) (@CMahadevappa) June 15, 2023
ಇದನ್ನೂ ಓದಿ : ಕಾಂಗ್ರೆಸ್ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು : ತೇಜಸ್ವಿ ಸೂರ್ಯ
ಜವಾಬ್ದಾರಿಯುತ ಸಮಾಜ ನಿರ್ಮಾಣ
ಈ ಹಿನ್ನಲೆಯಲ್ಲಿ ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಸಂವಿಧಾನದ ಆಶಯಗಳ ಬಗ್ಗೆ ಅಗತ್ಯ ಮೂಡಿಸುವ ಮೂಲಕ ಜವಾಬ್ದಾರಿಯುತ ಸಮಾಜದ ನಿರ್ಮಾಣ ಆಗಬೇಕು. ಈ ಉದ್ದೇಶದಿಂದ ಸಂವಿಧಾನ ಪ್ರಸ್ತಾವನೆ ಓದಿನ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದರ ಜೊತೆಗೆ ಇಲಾಖೆಯ ಪ್ರತಿ ಕಚೇರಿಯಲ್ಲಿಯೂ ಕೂಡಾ ಸಂವಿಧಾನದ ಪ್ರಸ್ತಾವನೆಯ ಪ್ರತಿಯನ್ನು ಅಂಟಿಸಬೇಕು ಎಂದು ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು ಆರೋಗ್ಯಕರ ಸಮಾಜದ ನಿರ್ಮಾಣದ ದೃಷ್ಟಿಯಿಂದ ಇದೊಂದು ಮಹತ್ತರ ನಿರ್ಧಾರ ಆಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಇದರ ಜೊತೆಗೆ ಇಲಾಖೆಯ ಪ್ರತಿ ಕಚೇರಿಯಲ್ಲಿಯೂ ಕೂಡಾ ಸಂವಿಧಾನದ ಪ್ರಸ್ತಾವನೆಯ ಪ್ರತಿಯನ್ನು ಅಂಟಿಸಬೇಕೆಂದು ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು ಆರೋಗ್ಯಕರ ಸಮಾಜದ ನಿರ್ಮಾಣದ ದೃಷ್ಟಿಯಿಂದ ಇದೊಂದು ಮಹತ್ತರ ನಿರ್ಧಾರ ಆಗಿದೆ ಎಂದು ನಾನು ಭಾವಿಸುತ್ತೇನೆ
3/3
— Dr H C Mahadevappa(Buddha Basava Ambedkar Parivar) (@CMahadevappa) June 15, 2023