Site icon PowerTV

ಹಿಂದೂ ವಿರೋಧಿ ಸಿದ್ದರಾಮಯ್ಯ ಸರ್ಕಾರ ; ಮಾಜಿ ಸಚಿವ ಬಿಸಿ ನಾಗೇಶ್​

ತುಮಕೂರು:  ಸಿಎಂ ಸಿದ್ದರಾಮಯ್ಯಗೆ ಕಾಣುತ್ತಿರುವುದು ಟಿಪ್ಪು ಸುಲ್ತಾನ್​ ಅಷ್ಟೇ. ರೈತರು ಮಕ್ಕಳ ಶಿಕ್ಷಣದ ಬಗ್ಗೆ ಅಲ್ಲ. ಹಿಂದೂ ವಿರೋಧಿ ಸರ್ಕಾರ ರಾಜ್ಯ ಸರ್ಕಾರ ಇದರಲ್ಲಿ ಯಾವುದೇ ಅನುಮಾನವೇ ಇಲ್ಲ ಎಂದರು.

ಹೌದು, ಹೆಡ್ಗೆವಾರ್ ಹಾಗೂ ಸೂಲಿಬೆಲೆ ಪಠ್ಯ ಕೈ ಬಿಟ್ಟ ವಿಚಾರವಾಗಿ ಮಾತನಾಡಿದ ಅವರು ರೈತರು, ಮಕ್ಕಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಯೋಚನೆಯೇ ಇಲ್ಲ.ಇನ್ನೂ ಸುಪ್ರೀಂಕೋರ್ಟ್​​ನಲ್ಲಿ ಹಿಜಾಬ್ ಪ್ರಕರಣ ಇದ್ದರೂ ಮತ್ತು ಮುಸ್ಲಿಮರ ಮತ ಬ್ಯಾಂಕ್ ಭದ್ರಗೊಳಿಸಲು ಪಠ್ಯಕ್ಕೆ ಕೈಹಾಕಿದ್ದಾರೆ ರಾಜ್ಯ ಸರ್ಕಾರ ಮಕ್ಕಳಿಗೆ ಸುಳ್ಳು ಇತಿಹಾಸ ಹೇಳಲು ಹೊರಟಿದೆ ಎಂದು ವಾಗ್ದಾಳಿ ಮಾಡಿದರು.

ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಮತಗಳು ಬೇಕಾಗಿದ್ದು, ಸಿದ್ದರಾಮಯ್ಯ ಅವರದ್ದು ಹಿಂದೂ ವಿರೋಧಿ ಸರ್ಕಾರವಾಗಿದೆ. ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಎಲ್ಲವನ್ನೂ ರಾಜಕೀಯಗೊಳಿಸಲು ಬಯಸಿದ್ದು, ಮತ್ತೆ ಹಿಜಾಬ್ ಜಾರಿಗೊಳಿಸಬಹುದು ಎಂದರು.

 

 

Exit mobile version