Site icon PowerTV

ಕಾಂಗ್ರೆಸ್ಸಿಗರು ನನ್ನ ಕೆಲಸದ ಪ್ರಚಾರ ಮಾಡಲಿಲ್ಲ : ಸಚಿವ ಹೆಚ್.ಸಿ ಮಹದೇವಪ್ಪ 

ಬೆಂಗಳೂರು: ಜನರಿಗೆ ಹೆಚ್ಚು ಸಮಯ ಕೊಡದ ಕಾರಣ ಕಳೆದ ಬಾರಿ ಸೋಲು ಕಂಡಿದ್ದೆ ಎಂದು ಸಮಾಜಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ.

ಹೌದು, ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನಾನು ಚುನಾವಣೆಯಲ್ಲಿ 6 ಬಾರಿ ಗೆದ್ದಿದ್ದೇನೆ, ಮೂರು ಬಾರಿ ಸೋತಿದ್ದೇನೆ. ಮೂರು ಬಾರಿಯೂ ನನ್ನಿಂದ ನಾನೇ ಸೋತಿದ್ದೇನೆ. ಗೆದ್ದಾಗ ಮಂತ್ರಿ ಆಗುತ್ತಿದ್ದೆ, ಜನರಿಗೆ ಹೆಚ್ಚು ಸಮಯ ಕೊಡುತ್ತಿರಲಿಲ್ಲ. ಕಾರ್ಯಕರ್ತರಿಂದ ದೂರವಾಗಿದ್ದ ಕಾರಣ ಸೋಲಾಯಿತು ಅಷ್ಟೇ ಎಂದಿದ್ದಾರೆ.

ಇದನ್ನೂ ಓದಿ: ಅಕ್ಕಿಗಾಗಿ ಅನ್ಯ ರಾಜ್ಯಗಳ ಮೊರೆ ಹೋದ ರಾಜ್ಯಸರ್ಕಾರ 

ನಾನು ಯಾವತ್ತು ಸೋತಾಗ ಕುಗ್ಗಿಲ್ಲ, ಗೆದ್ದಾಗ ಬೀಗಿಲ್ಲ. ಯಾವತ್ತೂ ಟಿಕೆಟ್ ಕೇಳಿಲ್ಲ, ನನ್ನ ಹೋರಾಟ ನೋಡಿ ಟಿಕೆಟ್ ನೀಡಿದ್ದಾರೆ. ನಾನು ತೆರೆದ ಪುಸ್ತಕ, ಯಾರು ಬೇಕಾದರೂ ನೋಡಬಹುದು. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ, ಆದರೆ ಪ್ರಚಾರ ಮಾಡಿಕೊಳ್ಳಲಿಲ್ಲ ಎಂದು ತಿಳಿಸಿದ್ದಾರೆ. ದುರಾದೃಷ್ಟವಶಾತ್ ಕಾಂಗ್ರೆಸ್ಸಿಗರು ನನ್ನ ಕೆಲಸದ ಪ್ರಚಾರ ಮಾಡಲಿಲ್ಲ ಎಂದರು.

 

Exit mobile version