Site icon PowerTV

ಕಾರು-ಕಂಟೇನರ್ ಗಳ ಮಧ್ಯೆ ಸರಣಿ ಅಪಘಾತ : ಇಬ್ಬರು ಸಾವು, ಸ್ವಾಮೀಜಿಗೆ ಗಂಭೀರ ಗಾಯ

ಬೆಳಗಾವಿ : ಕಾರು, ಕಂಟೇನರ್‌ಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಸ್ವಾಮೀಜಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಗಂಭೀರ ಗಾಯಗಳಾಗಿವೆ.

ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿಸಿ ಇಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಬೆಳಗಾವಿಗೆ ಬರುತ್ತಿದ್ದರು. ವಿಶ್ವ ಹಿಂದೂ ಪರಿಷತ್- ಭಜರಂಗದಳ ಆಶ್ರಯದಲ್ಲಿ ಪ್ರತಿಭಟನೆ ಆಯೋಜನೆಗೊಂಡಿತ್ತು.

ಇದನ್ನೂ ಓದಿ : ಕಿಲ್ಲರ್ BMTCಗೆ ಬೆಂಗಳೂರಿನಲ್ಲಿ ಇಬ್ಬರು ಬಲಿ

ಇಬ್ಬರು ಸೇವಕರು ಮೃತ

ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಬರುತ್ತಿದ್ದ ಸ್ವಾಮೀಜಿ ಕಾರು ಮಾರ್ಗ ಮಧ್ಯೆ ಅಪಘಾತಕ್ಕಿಡಾಗಿದೆ. ವಾಹನದಲ್ಲಿದ್ದ ಸ್ವಾಮೀಜಿಯ ಇಬ್ಬರು ಸೇವಕರು ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಕಂಟೇನರ್ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಕ್ಕೆ ಸ್ವಾಮೀಜಿ ಅವರ ಕಾರು ಕಂಟೇನರ್‌ಗೆ ಗುದ್ದಿದೆ. ಸ್ವಾಮೀಜಿ ಕಾರಿಗೆ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಕಾಕತಿ ಠಾಣೆ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಡಸಿದ್ದೇಶ್ವರ ಶ್ರೀಗಳನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಸ್ವಾಮೀಜಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಲಾಗಿದೆ.

Exit mobile version