Site icon PowerTV

ರಾಜ್ಯದಲ್ಲಿ ಇಂದಿನಿಂದ 2 ದಿನ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯಕ್ಕೆ ಇನ್ನೂ ಕೆಲವು ದಿನಗಳಲ್ಲಿ ಮುಂಗಾರು ಪ್ರವೇಶ ಮಾಡಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹೌದು, ಈಗಲೇ ಮುಂಗಾರು ರಾಜ್ಯಕ್ಕೆ ಆಗಮಿಸಬೇಕಿತು. ಅದರೆ ಈ ಬಾರಿ ಮಳೆ ಬರುವುದು ಕೊಂಚ ಕಡಿಮೆಯಾಗಿದೆ.
ಯಾವ ಯಾವ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. 
ಬೆಂಗಳೂರು, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡು ಭಾಗದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಇರಲಿದೆ.

 

Exit mobile version