Site icon PowerTV

ಹಿರಿಯ ನಾಗರಿಕರು ದೇವರ ದರ್ಶನಕ್ಕೆ ಕ್ಯೂ ನಿಲ್ಲಬೇಕಿಲ್ಲ!

ಬೆಂಗಳೂರು : ಹಿರಿಯ ನಾಗರಿಕರು ಇನ್ನುಮುಂದೆ ರಾಜ್ಯದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಕ್ಯೂ ನಿಲ್ಲಬೇಕಿಲ್ಲ.

ಹೌದು, 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನೇರವಾಗಿ ದೇವರ ದರ್ಶನ ಅವಕಾಸ ಕಲ್ಪಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಧಾರ್ಮಿಕ ದತ್ತಿ ಇಲಾಖೆ ಇಲಾಖೆ ಆದೇಶ ಹೊರಡಿಸಿದೆ. ದೇವಾಲಯಗಳಲ್ಲಿ ಹಿರಿಯ ನಾಗರಿಕರ ಸಹಾಯ ಕೇಂದ್ರವನ್ನು ಸ್ಥಾಪಿಸಬೇಕು. ಹಿರಿಯ ನಾಗರೀಕರಿಗೆ ಸಹಕರಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವುದು, ಸದರಿ ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿಗಳನ್ನು ನಿಯೋಜಿಸಿ ಹಿರಿಯ ನಾಗರೀಕರಿಗೆ ಅರಿತ ದರ್ಶನ ಏರ್ಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ.

ಹಿರಿಯ ನಾಗರೀಕರು ಅವರ ವಯಸ್ಸಿನ ದಾಖಲೆ(ಆಧಾರ ಕಾರ್ಡ್) ತೋರಿಸಿದಲ್ಲಿ ಅವರಿಗೆ ನೇರವಾಗಿ ದೇವರ ದರ್ಶನಕ್ಕೆ ಅನುಕೂಲವಾಗುವಂತ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೇವಸ್ಥಾನಗಳಲ್ಲಿ ಅವಕಾಶ

ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ‘ಎ’ ಮತ್ತು ‘ಬಿ’ ವರ್ಗದ ದೇವಾಲಯಗಳಲ್ಲಿ ಹಿರಿಯ ನಾಗರಿಕರಿಗೆ ನೇರ ದರ್ಶನದ ಅವಕಾಶ ಸಿಗಲಿದೆ. ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಕುಕ್ಕೆ ಸುಬ್ರಮಣ್ಯ, ಚಾಮುಂಡಿಬೆಟ್ಟ, ಸಿಗಂದೂರು, ಕೊಲ್ಲೂರು ಸೇರಿದಂತೆ ಎಲ್ಲ ಪ್ರಮುಖ ದೇಗುಲಗಳಲ್ಲಿ ಹಿರಿಯ ನಾಯಕರಿಗೆ ಈ ಸೌಲಭ್ಯ ಇರಲಿದೆ.

Exit mobile version