Site icon PowerTV

International Yoga Day 2023 : ವಿಶ್ವ ಯೋಗ ದಿನಾಚರಣೆಗೆ ಅಮೆರಿಕದಿಂದ ಪ್ರಧಾನಿ ಮೋದಿ ವಿಡಿಯೋ ಸಂದೇಶ

ಬೆಂಗಳೂರು :  ವಿಶ್ವ ಯೋಗ ದಿನದ (International Yoga Day) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ವಿಡಿಯೋ ಮೂಲಕ ಸಂದೇಶ ನೀಡಿದ್ದಾರೆ.

ಹೌದು, ಪ್ರಧಾನಿ ನರೇಂದ್ರ ಮೋದಿಯವರು ಸದ್ಯ ಅಮೆರಿಕ ಪ್ರವಾಸದಲ್ಲಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ (UNHC) ಆಯೋಜಿಸಲಾದ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಯೋಗ ದಿನದ ಸಂದರ್ಭದಲ್ಲಿ ನ್ಯೂಯಾರ್ಕ್‌ನಿಂದ ವಿಶೇಷ ಸಂದೇಶವನ್ನು ಕಳುಹಿಸಿರುವ ಪ್ರಧಾನಿ ಮೋದಿ ಮತ್ತು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಅಂತಾರಾಷ್ಟ್ರೀಯ ಯೋಗ ದಿನದ ಮೂಲಕ ಯೋಗವು ಜಾಗತಿಕ ಆಂದೋಲನವಾಗಿದೆ ಎಂದು ಹೇಳಿದರು.

ಇದರೊಂದಿಗೆ ಯೋಗ ದಿನದ ಅಂಗವಾಗಿ ಇಂದು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಆಯೋಜಿಸಲಾಗಿರುವ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.

Exit mobile version