ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ(Siddaramaiah) ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೌದು ಜ್ಬರದ ಹಿನ್ನೆಲೆಯಲ್ಲಿ ಪಾರ್ವತಿ(Parvathi) ಅವರು ನಿನ್ನೆ ರಾತ್ರಿ 11.30ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರ ನವದೆಹಲಿ ಪ್ರವಾಸದ (Delhi Tour) ಸಮಯ ಬದಲಾವಣೆಯಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಮಳೆ
ಇನ್ನೂ ಸಿಎಂ ಸಿದ್ದರಾಮಯ್ಯ ಅವರು ಇಂದು(ಜೂನ್ 21) ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿತ್ತು. ಆದ್ರೆ, ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ. ಹೀಗಾಗಿ ಬೆಳಗ್ಗೆ 11.30 ಗೆ ಹೆಚ್ಎಎಲ್ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ದೆಹಲಿಗೆ ತೆರಳಲಿದ್ದಾರೆ.