Site icon PowerTV

ಆ ಮಂತ್ರಿಗೆ ಸ್ವಲ್ಪವಾದರೂ ಸಾಮಾನ್ಯ ಜ್ಞಾನ ಇದೆಯಾ? : ಭಗವಂತ ಖುಬಾ ಕಿಡಿ

ಬೀದರ್ : ಆ ಮಂತ್ರಿಗೆ ಸ್ವಲ್ಪವಾದರೂ ಸಾಮಾನ್ಯ ಜ್ಞಾನ ಇದೆಯಾ? ಎಂದು ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕೇಂದ್ರ ಸಚಿವ ಭಗವಂತ ಖುಬಾ ಕಿಡಿಕಾರಿದರು.

ಬೀದರ್‌ ನ ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ವೆಬ್‌‌ಸೈಟ್ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದ್ದಾರೆ ಎಂಬ ಸತೀಶ್ ಜಾರಕಿಹೊಳಿ ಆರೋಪಕ್ಕೆ ಖಾರವಾಗಿ ಪ್ರತಿಕ್ರಿಯಿಸಿದರು.

ಇಂತಹ ನಾಚಿಕೆಗೇಡಿನ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು, ಜನರಿಗೆ ನೀಡಿರುವ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ಕಾಂಗ್ರೆಸ್ ನಾಯಕರು ಮುಂದಾಗಬೇಕು. ಆ ಮಂತ್ರಿಗೆ ಸ್ವಲ್ಪವಾದರೂ ಸಾಮಾನ್ಯ ಜ್ಞಾನ ಇದೆಯಾ? ಎಂದು ಛೇಡಿಸಿದರು.

ಇದನ್ನೂ ಓದಿ : ಮೋದಿ ಅವರನ್ನ ಬೈದ್ರೆ, ಆಕಾಶಕ್ಕೆ ಉಗುಳಿದಂತೆ : ಬಸವರಾಜ ಬೊಮ್ಮಾಯಿ

ಗ್ಯಾರಂಟಿ ನೀಡಲಾಗದೇ ಆರೋಪ

ಸುಖಾ ಸುಮ್ಮನೆ ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಬಿಡಿ. ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಲಾಗದೇ, ಈ ರೀತಿ ಸುಳ್ಳು ಆರೋಪ ಮಾಡಿ ಗ್ಯಾರಂಟಿ ಅನುಷ್ಠಾನಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡದೇ ತಮ್ಮ ಭರವಸೆಗಳನ್ನು ಈಡೇಸುರವ ಕೆಲಸಕ್ಕೆ ಮುಂದಾಗಬೇಕು ಎಂದು ಕುಟುಕಿದರು.

ಕುಣಿಯೋಕೆ ಬಾರದವನಿಗೆ ನೆಲ ಡೊಂಕು

ಅಕ್ಕಿ ವಿಚಾರವಾಗಿ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ ಕುರಿತು ಮಾತನಾಡಿ, ಯಾವ ಪುರುಷಾರ್ಥಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ಮಾಡಿದೆ. ಜನರಿಗೆ ಸುಳ್ಳು ಹೇಳಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕುಣಿಯೋಕೆ ಬಾರದವ ನೆಲ ಡೊಂಕು ಅನ್ನೊ ಹಾಗೆ, ಕಾಂಗ್ರೆಸ್ ಸರ್ಕಾರ ವರ್ತನೆ ಮಾಡುತ್ತಿದೆ. ಜನರಿಗೆ ಸುಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದು, ಇದೀಗ ಷರತ್ತು ಹಾಕ್ತಿದ್ದಾರೆ ಎಂದು ಚಾಟಿ ಬೀಸಿದರು.

Exit mobile version