Site icon PowerTV

ಲೋಕಸಭಾ ಚುನಾವಣೆ ಗೆಲ್ಲಲು ಶಾಸಕರಿಗೆ ಟಾಸ್ಕ್ ಕೊಟ್ಟ ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಸೋತ ಮಾಜಿ ಶಾಸಕರಿಗೆ 2024ರ ಲೋಕಸಭಾ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೀಡಿದ್ದಾರೆ. 

ಹೌದು, ವಿಸ್ತಾರಕರ ಜೊತೆಗೆ ಸಭೆ ನಡೆಸಿ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ಬಗ್ಗೆ ಮಾಹಿತಿ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೋತ ಮಾಜಿ ಶಾಸಕರಿಗೆ ಪಾರ್ಲಿಮೆಂಟ್ ಚುನಾವಣೆ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ನೀಡಲಿದ್ದಾರೆ.

2023 ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಿನಾಯ ಸೋಲು ನೋಡಿದ ಕಾರಣ ಕಮಲ ಪಕ್ಷದಲ್ಲಿ ಹಲವಾರು ಬದಲಾವಣೆ ಆಗುವ ಸಾಧ್ಯತೆಯಿದೆ. ವಿಧಾನಸಭೆ ಚುನಾವಣೆ ಸೋಲಿಗೆ ಬಿಜೆಪಿ ಅವಲೋಕನ ಸಭೆಯಲ್ಲಿ ಸೋಲಿಗೆ ಕಾರಣ ಮಾಜಿ ಶಾಸಕರೇ ಎಂದು ವಿಸ್ತಾರಕರು ಸಭೆಯಲ್ಲಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆಯ ತಾಂತ್ರಿಕ ಸಮಸ್ಯೆ ಬಗೆಹರಿಸಲು ಬೆಸ್ಕಾಂ ಮಾಸ್ಟರ್ ಪ್ಲಾನ್

ಇನ್ನೂ ಕ್ಷೇತ್ರದ ಜನರ ಜೊತೆಗೆ ಸಂಪರ್ಕದಲ್ಲಿ ಇರುವಂತೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಲಹೆ ನೀಡಿದ್ದು,ಸೋಲಿನ ಪರಾಮರ್ಶೆಯ ಜೊತೆಗೆ ಪಾರ್ಲಿಮೆಂಟ್ ಚುನಾವಣೆಯ ಟಾಸ್ಕ್ ಕೂಡ ನೀಡಿದ್ದಾರೆ.

ಕಟೀಲ್‌ ಸಲಹೆ ಏನು..?

 

 

 

Exit mobile version