Site icon PowerTV

ಅಪಾರ್ಟ್‍ಮೆಂಟ್​ನ 10ನೇ ಮಹಡಿಯಿಂದ ಹಾರಿ ಮಹಿಳೆ ಸಾವು

ಬೆಂಗಳೂರು: ಅಪಾರ್ಟ್‍ಮೆಂಟ್ 10ನೇ ಮಹಡಿಯಿಂದ ಮೇಲಿಂದ ಬಿದ್ದು ಮಹಿಳೆಯೊಬ್ಬಳು ಸಾವನ್ನಪ್ಪಿದ ಘಟನೆ ಯಲಹಂಕ (Yelahanka) ಬಳಿಯ ನಾಗೇನಹಳ್ಳಿಯಲ್ಲಿ ನಡೆದಿದೆ.

ಹೌದು, ಅಪಾರ್ಟ್‍ಮೆಂಟ್‍ನ 10ನೇ ಮಹಡಿಯಿಂದ ಮಹಿಳೆ ಕೆಳಗೆ ಬಿದ್ದಿದ್ದಾಳೆ. ಈಕೆ ಲಕ್ನೋ ಮೂಲದ ಅಮೃತಾ ಶರ್ಮ (27) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಸುಮಾರು 10 ಗಂಟೆಗೆ ಈ ಘಟನೆ ನಡೆದಿದೆ. ಕೂಡಲೇ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ: ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗ ದುರ್ಮರಣ ; 11 ಅಧಿಕಾರಿಗಳ ಮೇಲೆ ಚಾರ್ಜ್ ಶೀಟ್…

ರಾತ್ರಿ ಎಲ್ಲರೂ ಮನೆಯಲ್ಲಿ ಇರುವಾಗ ಮಹಿಳೆ ಮಾತ್ರ ಅಡುಗೆ ಕೋಣೆಯ ಬಾಲ್ಕನಿಯಲ್ಲಿದ್ದಳು. ಈ ವೇಳೆ ಘಟನೆ ನಡೆದಿದೆ. ಮೃತ ಮಹಿಳೆಗೆ 2 ವಷದ ಹಿಂದಷ್ಟೆ ಮದುವೆಯಾಗಿತ್ತು. ಮಹಿಳೆಯ ತಂದೆ ಕೂಡ ಇತ್ತೀಚೆಗೆ ಮೃತಪಟ್ಟಿದ್ದರು. ಇದರಿಂದ ಆಕೆ ಮಾನಸಿಕವಾಗಿ ನೊಂದಿದ್ದಳು ಎಂದು ತಿಳಿದು ಬಂದಿದೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಅಂಬೇಡ್ಕರ್ ಅಸ್ಪತ್ರೆಗೆ (Ambedkar Hospital) ರವಾನೆ ಮಾಡಲಾಗಿದೆ. ಈ ಸಂಬಂಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version