Site icon PowerTV

ಮೋದಿ ಸೋಲಲ್ಲ, ರಾಹುಲ್‍ಗೆ ಮದುವೆ ಆಗಲ್ಲ : ಬೊಮ್ಮಾಯಿ ಲೇವಡಿ

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಸೋಲಲ್ಲ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮದುವೆ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ.

ಬೆಳಗಾವಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ಎದುರಿಸಲು ವಿರೋಧ ಪಕ್ಷದಲ್ಲಿ ಒಬ್ಬ ನಾಯಕ ಇಲ್ಲ. 25 ಸ್ಥಾನಗಳನ್ನು ರಾಜ್ಯದಲ್ಲಿ ಮತ್ತೆ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಪಾಟ್ನಾದಲ್ಲಿ ತೃತೀಯ ರಂಗದ ನಾಯಕರ ಸಭೆ ನಡೆಸಲಾಗಿದೆ. ಅಲ್ಲಿ ದೇಶದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿಲ್ಲ, ಬದಲಾಗಿ ರಾಹುಲ್ ಗಾಂಧಿಗೆ ಮದುವೆ ಮಾಡುವ ಬಗ್ಗೆ ಚರ್ಚೆ ಆಗಿದೆ ಎಂದು ಕುಟುಕಿದ್ದಾರೆ.

ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆಗೆ ಬೇರೆ ಬೇರೆ ದೃಷ್ಟಿಕೋನದಿಂದ ಜನ ತೀರ್ಮಾನ ಮಾಡುತ್ತಾರೆ. ನರೇಂದ್ರ ಮೋದಿ ಅವರು 9 ವರ್ಷ ಸ್ವಚ್ಛ, ದಕ್ಷ ಆಡಳಿತ ನೀಡಿದ್ದಾರೆ. ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ದೇಶದ ಪ್ರಧಾನಿ ಮಾಡಲು ಬಿಜೆಪಿ ಕಾರ್ಯಕರ್ತರು ಸಂಕಲ್ಪ ಮಾಡಬೇಕು ಎಂದು ಕರೆ ಕೊಟ್ಟಿದ್ದಾರೆ.

ಪಾಕಿಸ್ತಾನದ ಸೊಕ್ಕು ಅಡಗಿಸಿದ್ದು ಮೋದಿ

ದೇಶವು ನರೇಂದ್ರ ಮೋದಿ ಆಡಳಿತದಲ್ಲಿ ಸುರಕ್ಷಿತವಾಗಿದೆ. ಪಾಕಿಸ್ತಾನದ ಸೊಕ್ಕು ಅಡಗಿಸಿದ್ದು ಕೂಡ ಮೋದಿ. ದೇಶದಲ್ಲಿ 12 ಕೋಟಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಪ್ರತಿ ಮನೆಗೆ ನೀರನ್ನು ಕೊಡುವ ಬಗ್ಗೆ ಪ್ರಧಾನಿ ಹೇಳಿದ್ದರು. ಅದರಂತೆ 40 ಲಕ್ಷ ಮನೆಗಳಿಗೆ ರಾಜ್ಯದಲ್ಲಿ ನೀರು ಕೊಡಲಾಗಿದೆ. ರೈತರು, ವಿದ್ಯಾರ್ಥಿಗಳಿಗೆ ಹಲವು ಕಾರ್ಯ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಈಗ ಕರ್ನಾಟಕ ಎಟಿಎಂ ಆಗಿದೆ

ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೆಸ್ 40 ಪರ್ಸಂಟೇಜ್ ಆರೋಪ ಮಾಡಿತ್ತು. ಇದೀಗ ಅಧಿಕಾರಕ್ಕೆ ಬಂದ ಬಲಿಕ ರೇಟ್ ಫಿಕ್ಸ್ ಮಾಡುತ್ತಿದ್ದಾರೆ. ದೆಹಲಿಯವರಿಗೆ ಈಗ ಕರ್ನಾಟಕ ಎಟಿಎಂ ಆಗಿದೆ. ಈಗ ಪರ್ಸೆಂಟೇಜ್ ಫಿಕ್ಸ್ ಆಗುತ್ತಿದೆ. ಎಲ್ಲ ಕಡೆ ಪರ್ಸಂಟೇಜ್ ಫಿಕ್ಸ್ ಆಗುತ್ತಿದೆ ಎಂದು ಆರೋಪಿಸಿದ್ದಾರೆ.

Exit mobile version