Site icon PowerTV

ಜಯದೇವ ಆಸ್ಪತ್ರೆ ಸೇರಿ ಮೂವರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ, ಮಹಿಳಾ ಗಾಲ್ಫ್ ಆಟಗಾರ್ತಿ ಆದಿತಿ ಅಶೋಕ್ ಹಾಗೂ ವಾಣಿಜೋದ್ಯಮಿ ನಿತಿನ್ ಕಮತ್ ಅವರು ಆಯ್ಕೆ ಆಗಿದ್ದಾರೆ.

ಬೆಂಗಳೂರು ನಗರವನ್ನು ಸೃಷ್ಟಿಸಿದ ಮಹಾಪುರುಷ ಕೆಂಪೇಗೌಡ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡ್ತಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಈ ಸಾಲಿನ ಕೆಂಪೇಗೌಡ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದಾರೆ.

514ನೇ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನ ಆಚರಿಸುತ್ತಿದ್ದೇವೆ. ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಮೂರು ಜನರನ್ನ ಆಯ್ಕೆ‌ ಮಾಡಲಾಗಿದೆ. ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೂರು ಜನ ಸಾಧಕರನ್ನು ರಾಜ್ಯ ಸರ್ಕಾರದ ವತಿಯಿಂದ ಗೌರವಿಸಲಾಗುವುದು ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಇದನ್ನೂ ಓದಿ : ಗೌಡ್ರು ಕೋಟೆ ಹಾಸನದಲ್ಲಿ ಕೆಂಪೇಗೌಡ ಜಯಂತಿ

5 ಲಕ್ಷ ರೂ. ನಗದು, ಫಲಕ

ಈ ವರ್ಷ ಒಂದು ಸಂಸ್ಥೆಗೆ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಕೊಡಲಾಗುತ್ತಿದೆ. ಜಯದೇವ ಆಸ್ಪತ್ರೆ ಸಂಸ್ಥೆಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಕೊಡಲಾಗುತ್ತಿದೆ. ಹೆಸರಾಂತ ಸ್ಟಾಕ್ ಟ್ರೇಡರ್ ಝೀರೋಧ ಮುಖ್ಯಸ್ಥ ನಿತಿನ್ ಕಾಮತ್ ಹಾಗೂ ಟೊಕಿಯೋ ಒಲಿಂಪಿಕ್ ನಲ್ಲಿ ಗಾಲ್ಫ್ ನಲ್ಲಿ ಸಾಧನೆ ಮಾಡಿದ ಅದಿತಿ ಅಶೋಕ್ ಅವರಿಗೆ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಪ್ರಶಸ್ತಿಯು 5 ಲಕ್ಷ ರೂ. ನಗದು ಹಾಗೂ ಫಲಕ ಹೊಂದಿರುತ್ತೆ ಎಂದು ಮಾಹಿತಿ ನೀಡಿದರು.

Exit mobile version