Monday, August 25, 2025
Google search engine
HomeUncategorizedಸತೀಶ್​ ಜಾರಕಿಹೊಳಿ ಸಿಎಂ ಆಗಲಿ : ಸಚಿವ ಕೆ.ಎನ್.ರಾಜಣ್ಣ

ಸತೀಶ್​ ಜಾರಕಿಹೊಳಿ ಸಿಎಂ ಆಗಲಿ : ಸಚಿವ ಕೆ.ಎನ್.ರಾಜಣ್ಣ

ತುಮಕೂರು: ನಮ್ಮ ಸಮಾಜದಿಂದ ಸತೀಶ್​ ಜಾರಕಿಹೊಳಿ ಮುಖ್ಯಮಂತ್ರಿ ಆಗಲಿ ಅನ್ನೋದು ನಮ್ಮ ಆಸೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. 

ಹೌದು, ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಿದ್ದರೂ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಸಹಮತಕ್ಕೆ ಬರಲು ಪರದಾಡಿದ್ದ ಕಾಂಗ್ರೆಸ್ ಪಕ್ಷದಲ್ಲಿ ಇದೀಗ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ತುಮಕೂರಿನಲ್ಲಿ ನಡೆದ ವಾಲ್ಮೀಕಿ ಸಮುದಾಯದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಿಎಂ ಗಾದಿ ವಿಚಾರ ಮತ್ತೆ ಪ್ರಸ್ತಾಪ ಮಾಡಿದ್ದಾರೆ.

ಕಾಂಗ್ರೆಸ್ ನಲ್ಲಿ ಮತ್ತೆ ಮುನ್ನೆಲೆಗೆ ಬಂದ್ರೆ ನನಗೆ ಮುಖ್ಯಮಂತ್ರಿ ಆಗುವ ಅಭಿಲಾಷೆ ಇಲ್ಲ. ಆದರೆ ನಮ್ಮ ಸಮಾಜದಿಂದ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಲಿ ಎನ್ನುವುದು ನಮ್ಮ ಆಸೆ. ನಮ್ಮ ಸಮಾಜಕ್ಕೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎನ್ನುವ ಮೂಲಕ ಅವರು ಮುಂದಿನ ಮುಖ್ಯಮಂತ್ರಿ ಕುರಿತ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಶತಕದತ್ತ ಟೊಮ್ಯಾಟೋ ಬೆಲೆ ಏರಿಕೆ

ಈ ಕಾರ್ಯಕ್ರಮಕ್ಕೆ ಕೆಲವರು ಬಂದಿಲ್ಲ. ಹಾಗಂತ ಅವರು ಸಮಾಜದ ಪರವಾಗಿಲ್ಲ ಎಂದು ಅರ್ಥವಲ್ಲ. ಅವರು ಬೇರೆ ಕಾರ್ಯಕ್ರಮಗಳಲ್ಲಿ ಇದ್ದಾರೆ. ಪೂಜ್ಯ ಸ್ವಾಮೀಜಿಯವರು ತಮ್ಮ ಆಶೀರ್ವಚನದಲ್ಲಿ ಸಮುದಾಯದ ಬೇಡಿಕೆಗಳನ್ನು ತಿಳಿಸಿದ್ದಾರೆ. ಅವುಗಳನ್ನು ಈಡೇರಿಸುವ ಬಗ್ಗೆ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಆ ಎಲ್ಲ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳುತ್ತೇವೆ ಎನ್ನುವ ಭರವಸೆ ಇದೆ ಎಂದೂ ರಾಜಣ್ಣ ಹೇಳಿದರು.

ಎಲ್ಲರೂ ಒಟ್ಟಾದಾಗ ಮಾತ್ರ ರಾಜಕೀಯ ಪ್ರಾತಿನಿಧ್ಯ ಸಿಗಲು ಸಾಧ್

1998ರಲ್ಲಿ ನಾನು ಒಳ್ಳೆಯ ರೀತಿಯಲ್ಲೋ, ಕೆಟ್ಟ ರೀತಿಯಲ್ಲೋ ವಿಧಾನ ಪರಿಷತ್ ಸದಸ್ಯನಾದೆ. ನಮ್ಮ ಜಿಲ್ಲೆಯಲ್ಲಿರುವ ಅಸಹಾಯಕ ಸಮುದಾಯಗಳು ನನಗೆ ಈ ಸ್ಥಾನಮಾನ ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಎಸ್​ಟಿ ಸಮುದಾಯದ ಮೂವರನ್ನು ಮಂತ್ರಿ ಆಗಿಸಿದ್ದಾರೆ. ನಮ್ಮದೇ ಕಾಂಗ್ರೆಸ್ ಮುಖ್ಯಮಂತ್ರಿಯೊಬ್ಬರು ಒಂದೇ ಒಂದು ಮಂತ್ರಿ ಸ್ಥಾನ ಕೊಟ್ಟಿರಲಿಲ್ಲ. ಸಿದ್ದರಾಮಯ್ಯ ನಮ್ಮ ಸಮಾಜಕ್ಕೆ ಕೊಟ್ಟಿರುವ ಗೌರವ ಅದು. ಮುಂದಿನ ದಿನಗಳಲ್ಲಿ ಅಎಲ್ಲಾ ಜಾತಿಯವರು ನನಗೆ ಶೇ.80ರಿಂದ 90 ಮತ ನೀಡಿ ಗೆಲ್ಲಿಸಿದ್ದಾರೆ. ಹಿಂದ ಸಮುದಾಯದವರು ಎಲ್ಲ ಒಟ್ಟಾದಾಗ ಮಾತ್ರ ರಾಜಕೀಯ ಪ್ರಾತಿನಿಧ್ಯ ಸಿಗಲು ಸಾಧ್ಯ ಎಂದರು.

 

 

 

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments