Site icon PowerTV

ಸಾರಿಗೆ ನೌಕರರ ಮೇಲಿನ ಹಲ್ಲೆಕೋರರ ವಿರುದ್ದ ಕ್ರಮ ಕೈಗೊಳ್ಳಿ: ರಾಮಲಿಂಗಾ ರೆಡ್ಡಿಗೆ ನೌಕರರ ಮನವಿ

ಬೆಂಗಳೂರ: ರಾಜ್ಯದಲ್ಲಿ ಶಕ್ತಿ ಯೋಜನೆ ಅನುಷ್ಠಾನದ ಬಳಿಕ ರಾಜ್ಯದ ವಿವಿಧೆಡೆ ಸಾರಿಗೆ ಸಿಬ್ಬಂದಿಗಳ ಮೇಲೆ ಪ್ರಯಾಣಿಕರಿಂದ ನಡೆಯುತ್ತಿರುವ ಮಾರಣಾಂತಿಕ ಹಲ್ಲೆಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ರಾಜ್ಯ ಸಾರಿಗೆ ನೌಕರರ ಕೂಟದ ವತಿಯಿಂದ ಇಂದು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಲಾಯಿತು.

ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯದಲ್ಲೂ ಹೆಚ್ಚಳ ಕಂಡಿದ್ದು,ಅಲ್ಲದೆ ಪ್ರಯಾಣಿಕರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ ಆದರೆ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ ಮತ್ತು ಸಿಬ್ಬಂದಿಗಳ ಸಂಖ್ಯೆಯೇ ಇಲ್ಲವೆಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಇದನ್ನೂ ಓದಿ: ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಾನೂನು ಕ್ರಮ : ಸಚಿವ ಡಾ.ಜಿ.ಪರಮೇಶ್ವರ್

ಇಂತಹ ಅನೇಕ ಕಷ್ಟಗಳನ್ನೆಲ್ಲ ಸಹಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ,ಅಲ್ಲದೆ ಸಾರಿಗೆ ಸಿಬ್ಬಂದಿಗಳ ಮೇಲೆ ಹಲ್ಲೆಗಳಾಗಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲೂ ವಿಡಿಯೋಗಳು ವೈರಲ್ ಆಗಿ ಈಗಾಗಲೇ ಹಲವು ಕಡೆ ಪ್ರಕರಣಗಳು ದಾಖಲಾಗಿವೆ.

ಆದರೂ ಸಹ ಸಾರಿಗೆ ನೌಕರರ ಮೇಲಿನ ದೌರ್ಜನ್ಯಗಳು ಮುಂದುವರೆಯುತ್ತಿರುವ ವಿಷಯವನ್ನು ಸೂಕ್ಷ್ಮವಾಗಿ ಪರಿಗಣಿಸಿ, ಹಲ್ಲೆಮಾಡಿದ ಕಿಡಿಗೇಡಿಗಳ ವಿರುದ್ದ ಸೂಕ್ತ ಕಾನುನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಲಾಗಿದೆ. ಸಾರಿಗೆ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಲ್ಲೆಡೆ ಎಚ್ಚರಿಕೆಯ ಫಲಕಗಳನ್ನು ಅಳವಡಿಸಬೇಕೆಂದು ಆಗ್ರಹಿಸಲಾಗಿದೆ.

Exit mobile version