Site icon PowerTV

ಆಗಸ್ಟ್ ತಿಂಗಳಲ್ಲಿ ಮಹಿಳೆಯರ ಅಕೌಂಟಿಗೆ ಹಣ ಹಾಕ್ತೇವೆ : ಸಚಿವೆ ಹೆಬ್ಬಾಳ್ಕರ್

ಬೆಂಗಳೂರು :- ಆಗಸ್ಟ್ ತಿಂಗಳಲ್ಲಿ ಮಹಿಳೆಯರ ಅಕೌಂಟ್ ಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಹಾಕೇ ಹಾಕುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ವಿಧಾನಸೌಧದಲ್ಲಿಂದು ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿಯ ಕುರಿತು ಮಹತ್ವದ ಚರ್ಚೆಯಾಗಿದೆ. ನಿಖರವಾದ ದಿನಾಂಕದ ಜೊತೆಗೆ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ಜು ಜುಲೈ 3 ರಂದು ನೀಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ : 10 ಕೆಜಿ ಅಕ್ಕಿಯ ಸಂಪೂರ್ಣ ದುಡ್ಡನ್ನು ಜನರ ಖಾತೆಗೆ ಹಾಕಿ : ಬಿಜೆಪಿ ಆಗ್ರಹ

ಈಗಾಗಲೇ ಮುಖ್ಯಮಂತ್ರಿಗಳು ಅಪ್ಲಿಕೆಷನ್ ಗೆ ಒಪ್ಪಿಗೆ ಸೂಚಿಸಿದ್ದಾರೆ ಅಲ್ಲದೆ ಗೃಹಲಕ್ಷ್ಮೀ ಯೋಜನೆಗೆ ಸರ್ವರ್ ಸಮಸ್ಯೆಯಿಂದ ಸ್ವಲ್ಪ ತಡವಾಗಿದೆ ಇನ್ನುಳಿದಂತೆ ಇತರ ಪ್ರಕ್ರಿಯೆಗಳು ಸರಾಗವಾಗಿ ಯಾವುದೇ ಅಡೆತಡೆಗಳಿಲ್ಲದೆ ಸಾಗುತ್ತಿವೆ ಎಂದರು. ಶೀಘ್ರದಲ್ಲೆ ಯೋಜನೆಗೆ ಚಾಲನೆ ನೀಡಿ ಜನರಿಗೆ ನೀಡಿರುವ ವಾಗ್ದಾನವನ್ನು ಪೂರ್ಣಗೊಳಿಸುತ್ತೇವೆ ಎಂದು ಸಚಿವೆ ಹೆಬ್ಬಾಳ್ಕರ್ ಮಾಹಿತಿ ನೀಡಿದರು.

Exit mobile version