Site icon PowerTV

ಕರಾವಳಿಯಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರಾವಳಿ ಭಾಗಗದ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವಡೆ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಐದು ದಿನ ಭಾರಿ ಮಳೆ

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ.ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆಯಿದೆ.

 ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ. ಈ ಮೂರು ಜಿಲ್ಲೆಗಳಿಗೆ ಗುರುವಾರ ‘ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ  

ಕರಾವಳಿಯಲ್ಲಿ 40-45 ಕಿ.ಮೀ.ಯಿಂದ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಒಂದೆರಡು ಸಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

 

Exit mobile version