Saturday, August 23, 2025
Google search engine
HomeUncategorizedಮದುವೆ ಆಗೋಕೆ ಕನ್ಯೆ ಸಿಗದೆ ಯುವಕ ಆತ್ಮಹತ್ಯೆ

ಮದುವೆ ಆಗೋಕೆ ಕನ್ಯೆ ಸಿಗದೆ ಯುವಕ ಆತ್ಮಹತ್ಯೆ

ಬೆಂಗಳೂರು: ಇತ್ತೀಚೆಗೆ ಮದುವೆಯಾಗಲು ಯುವಕರಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು, ಅಂತೆಯೇ ಇಲ್ಲೊಬ್ಬ ಯುವಕ ಇದೇ ವಿಚಾರದಿಂದ ಮನನೊಂದು ಸಾವಿನ ದಾರಿ ಹಿಡಿದ್ದಾನೆ.

ಹೌದು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಈ ಘಟನೆ ನಡೆದಿದೆ.ಮದುವೆ ಆಗೋಕೆ ಕನ್ಯೆ ಸಿಗದ ಕಾರಣ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ಯುವಕನನ್ನು ನಾಗರಾಜ ಗಣಪತಿ ಗಾಂವ್ಕರ್ (35)  ಎಂದು ಗುರುತಿಸಲಾಗಿದ್ದು, ಈತ ಯಲ್ಲಾಪುರದ ತೇಲಂಗಾರ ಕಿರಗಾರಿಮನೆ ನಿವಾಸಿಯಾಗಿದ್ದಾನೆ.

ಎಲ್ಲಿಯೂ ನಾಗರಾಜ್‍ಗೆ ಹೆಣ್ಣು ಸಿಗುತ್ತಿರಲಿಲ್ಲ

ಈತ ತನ್ನ ಜೀವನವನ್ನೂ ಸಾಗಿಸುವುದಕ್ಕಾಗಿ  ಕೃಷಿ (Agriculture) ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ನಾಗರಾಜ್ ಎಲ್ಲರಂತೆಯೇ ತಾನೂ ಮದುವೆಯ ಕನಸು ಕಂಡಿದ್ದ. ಅಂತೆಯೇ ಹಲವು ಸಮಯದಿಂದ ಮದುವೆಗಾಗಿ ಹೆಣ್ಣು ಹುಡುಕುತ್ತಿದ್ದ. ಸಂಬಂಧಿಕರು, ಬ್ರೋಕರ್ ಗಳ ಬಳಿ ಹೆಣ್ಣು (Girl For Marriage) ಹುಡುಕಿಕೊಡಲು ಹೇಳುತ್ತಿದ್ದ. ಆದರೆ ಎಲ್ಲಿಯೂ ನಾಗರಾಜ್‍ಗೆ ಹೆಣ್ಣು ಸಿಗುತ್ತಿರಲಿಲ್ಲ. 

ಹೆಣ್ಣು ಸಿಗದೆ ಮನನೊಂದು ಯುವಕ ಆತ್ಮಹತ್ಯೆ

ತನಗೆ ಯಾಕೆ ಹೆಣ್ಣು ಸಿಗುತ್ತಿಲ್ಲ ಎಂದು ನಾಗರಾಜ್ ಪ್ರತಿನಿತ್ಯ ಯೋಚನೆಯಲ್ಲಿಯೇ ಮುಳುಗುತ್ತಿದ್ದ. ಹೀಗಾಗಿ ಖಿನ್ನತೆಗೆ ಒಳಗಾಗಿದ್ದ ನಾಗರಾಜ್ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದಾನೆ. ತನ್ನ ಮನೆಯ ಸಮೀಪದ ಗುಡ್ಡಕ್ಕೆ ತೆರಳಿ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

 

 

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments