Site icon PowerTV

‘ಪಂಚೆ ಪಡೆ’ ಗೆಲ್ಲುವುದೋ, BSY ಬ್ರಿಗೇಡ್ ಗೆಲ್ಲುವುದೋ? : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಸ್ವಪಕ್ಷದ ವಿರುದ್ಧವೇ ಬೆಂಕಿಯುಗುಳಿದ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯರ ಹೇಳಿಕೆಯನ್ನೇ ಅಸ್ತ್ರವಾಗಿ ಬಳಸಿರುವ ರಾಜ್ಯ ಕಾಂಗ್ರೆಸ್ ಬಿಜೆಪಿ ನಾಯಕರಿಗೆ ಟಕ್ಕರ್ ಕೊಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಪಂಚೆ ಪಡೆ ಗೆಲ್ಲುವುದೋ, BSY ಬ್ರಿಗೇಡ್ ಗೆಲ್ಲುವುದೋ ಕಾಲವೇ ಉತ್ತರಿಸಲಿದೆ ಎಂದು ಕುಟುಕಿದೆ.

ಬಿಜೆಪಿಯ ಅಂತರಂಗದ ಸತ್ಯಗಳನ್ನು ನಾವು ಮೊದಲೇ ಹೇಳಿದ್ದೆವು. ಈಗ ಅವರ ಬಾಯಲ್ಲೇ ಹೊರಬರುತ್ತಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೊಂಬೆ ಸಿಎಂ (#PuppetCM) ಆಗಿದ್ದರು ಎಂದಿದ್ದೆವು. ಬೊಮ್ಮಾಯಿಯವರ ಕೈ ಕಟ್ಟಿ ಹಾಕಿದ್ದರು ಅಂತ ರೇಣುಕಾಚಾರ್ಯ ಹೇಳಿದ್ದಾರೆ ಎಂದು ಛೇಡಿಸಿದೆ.

ಇದನ್ನೂ ಓದಿ : ಹೊಸಬರು ಚುನಾವಣೆಗೆ ನಿಲ್ಲೋದಾದ್ರೆ ಕ್ಷೇತ್ರ ಬಿಟ್ಟುಕೊಡುವೆ : ಸಂಸದ ಡಿ.ಕೆ.ಸುರೇಶ್

ಸಂತೋಷ ಕೂಟದ ಆಟವಿದೆ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಾಮಕವಸ್ಥೆಯ ಅಸಮರ್ಥ ಅಧ್ಯಕ್ಷರು ಎಂದಿದ್ದೆವು. ಕಟೀಲ್ ಸಂತೋಷ ಕೂಟದ ಕೈಗೊಂಬೆ ಎಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪದಚ್ಯುತಿ ಹಿಂದೆ ಸಂತೋಷ ಕೂಟದ ಆಟವಿದೆ ಎಂದಿದ್ದೆವು. ಇದೇ ವಿಷಯವನ್ನು ಇಂದು ಬಿಜೆಪಿಗರು ಹೇಳುತ್ತಿದ್ದಾರೆ ಎಂದು ಟಾಂಗ್ ಕೊಟ್ಟಿದೆ.

ವಲಸಿಗರನ್ನು ಬಿಜೆಪಿ ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದಿದ್ದೆವು. ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಈಗ ಹಾಗೆಯೇ ಮಾತಾಡಿದ್ದಾರೆ. ಈಗ ಬಿಜೆಪಿ ಹಾಗೂ ಆರ್.ಎಸ್.ಎಸ್ (#BJPvsRSS) ಆಟ ಶುರುವಾಗಿದೆ ಎಂದು ಲೇವಡಿ ಮಾಡಿದೆ.

Exit mobile version