Site icon PowerTV

ಬಿಜೆಪಿ ಅವಧಿಯಲ್ಲಿ KERC ವಿದ್ಯುತ್ ದರ ಹೆಚ್ಚಳ ಮಾಡಿತ್ತು : ಸಿದ್ದರಾಮಯ್ಯ

ಬೆಂಗಳೂರು : ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೆ.ಇ.ಆರ್.ಸಿ ವಿದ್ಯುತ್ ದರ ಹೆಚ್ಚಳ ಮಾಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಮಂಜುನಾಥ್ ಹೆಚ್ ಅವರ ನೇತೃತ್ವದ ನಿಯೋಗವು ಸಿಎಂ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ. ಬಿಜೆಪಿ ಅವಧಿಯಲ್ಲಿ ವಿವಿದ್ಯುತ್ ದರ ಹೆಚ್ಚಳವಾಗಿತ್ತು. ಅವರಿಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಇದನ್ನೂ ಓದಿ : ಇಂದು ಮಧ್ಯರಾತ್ರಿಯಿಂದಲೇ ಗೃಹಜ್ಯೋತಿ ಆರಂಭ

ಬೇಡಿಕೆ ಈಡೇರಿಸುವ ಭರವಸೆ

ಪೀಣ್ಯಾ ಕೈಗಾರಿಕಾ ಟೌನ್ ಶಿಪ್ ಪ್ರಾಧಿಕಾರ ಸ್ಥಾಪನೆ, ಕೆಐಎಡಿಬಿ ಕೈಗಾರಿಕಾ ಪ್ರದೇಶದ ಮೂಲಭೂತ ಸೌಕರ್ಯ ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಪರಿಶೀಲಿಸಿದ ನಂತರ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ಆಶ್ವಾಸನೆ ನೀಡಿದರು.

ಈ ವೇಳೆ ಸಂಘದ ಉಪಾಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಚಂದ್ರಶೇಖರ್, ಜಂಟಿ ಕಾರ್ಯದರ್ಶಿ ಹೆಚ್.ಕೆ.ಮಲ್ಲೇಶ್ ಗೌಡ, ಖಜಾಂಚಿ ತಿಪ್ಪೇಶಪ್ಪ ಬಿ.ಸಿ ಮತ್ತಿತರಿದ್ದರು.

Exit mobile version