Site icon PowerTV

ಚಲಿಸುತ್ತಿದ್ದ ರೈಲಿನಲ್ಲಿ ಕುಡಿದು ಕತ್ತಿಯಿಂದ ದಾಳಿ ; ಕತ್ತಿ ಝಳಪಿಸುತ್ತಿದ್ದ ಇಬ್ಬರ ಬಂಧನ

ಮಂಗಳೂರು : ಕುಡಿದ ಮತ್ತಿನಲ್ಲಿ ಕತ್ತಿಯಿಂದ ದಾಳಿ ನಡೆಸಿ ಆತಂಕ ಸೃಷ್ಟಿಸಿದ ಇಬ್ಬರನ್ನು ಮಂಗಳೂರು ರೈಲ್ವೇ ಪೊಲೀಸರು ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ.

ಬಂಧಿತರು ತಮಿಳುನಾಡಿನ ಜಯಪ್ರಭು ಮತ್ತು ಪ್ರಸಾದ್ ಎಂದು ತಿಳಿದುಬಂದಿದೆ. ಜೂನ್ 30, ಶುಕ್ರವಾರ ಮುಂಬೈನಿಂದ ತಿರುನಲ್ವೇಲಿಗೆ ತೆರಳುತ್ತಿದ್ದ ವೇಳೆ ಕುಡಿದ ಮತ್ತಿನಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಕತ್ತಿ ಹಿಡಿದು ದಾಂಧಲೆ ನಡೆಸಿದ್ದಾರೆ ಘಟನೆಯಿಂದ ಭಯಭೀತರಾದ ಪ್ರಯಾಣಿಕರು ಒಂದು ಬೋಗಿಯಿಂದ ಮತ್ತೊಂದು ಬೋಗಿಗೆ ಓಡಿದ್ದಾರೆ.

ಇದನ್ನೂ ಓದಿ: ಹೆದ್ದಾರಿ ಪ್ರಾಧಿಕಾರ ಕೇಂದ್ರ ಸರಕಾರದ ನಿಯಂತ್ರಣದಲ್ಲಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಈ ವೇಳೆ ಆರೋಪಿಗಳನ್ನು ಟಿಟಿಇ ಬಾಬು, ಶ್ರೀನಿವಾಸ್ ಶೆಟ್ಟಿ ಮತ್ತು ತಿಮ್ಮಪ್ಪ ಗೌಡ ಎಂಬುವವರು ಹಿಡಿದಿಟ್ಟುಕೊಂಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಇಬ್ಬರನ್ನು ಬಂಧಿಸಿ ಎರಡು ಕತ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ರೈಲಿನ ಸೀಟು ಮತ್ತು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

Exit mobile version