Site icon PowerTV

ನೆಚ್ಚಿನ ಶಿಕ್ಷಕರನ್ನು ವರ್ಗಾವಣೆ ಮಾಡದಂತೆ ಊಟ ಬಿಟ್ಟು ಪಟ್ಟು ಹಿಡಿದ ವಿದ್ಯಾರ್ಥಿಗಳು

ಶಿವಮೊಗ್ಗ: ತಮ್ಮ ನೆಚ್ಚಿನ ಶಿಕ್ಷಕನ ವರ್ಗಾವಣೆ ಮಾಡದಂತೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪಟ್ಟು ಹಿಡಿದು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಜಿ. ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡಯಲ್ಲಿ ನಡೆದಿದೆ.

ಇದನ್ನೂ ಓದಿ: ತಂದೆಯಿಂದಲೇ ಮಗನ ಕೊಲೆ : ಬೆಚ್ಚಿಬಿದ್ದ ಜನತೆ

ವಿಕಲಚೇತನ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾದ ಕುಮಾರ್ ರನ್ನು ಇತ್ತೀಚೆಗೆ ವರ್ಗಾವಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದರು, ವಿಚಾರ ತಿಳಿದ ವಿದ್ಯಾರ್ಥಿಗಳು ವರ್ಗಾವಣೆ ಆದೇಶವನ್ನು ರದ್ದು ಮಾಡಿ ಶಿಕ್ಷಕರಾದ ಕುಮಾರ್ ರನ್ನು ತಮ್ಮ ಶಾಲೆಯಲ್ಲಿಯೇ ಮುಂದುವರೆಸುವಂತೆ ಪಟ್ಟು ಹಿಡಿದು ಊಟ ಮಾಡದೇ ಶಿಕ್ಷಣಾಧಿಕಾರಿಗಳ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

 

Exit mobile version