Site icon PowerTV

ಟ್ರಕ್ ಪಲ್ಟಿ : ಓರ್ವ ಸ್ಥಳದಲ್ಲೇ ಸಾವು, ಮತ್ತೊಬ್ಬನಿಗೆ ಗಾಯ

ಚಿತ್ರದುರ್ಗ : ಟ್ರಕ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಬ್ಬ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮಲ್ಲಾಪುರ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಮಹಾರಾಷ್ಟ್ರ ಕಡೆಯಿಂದ ಹೊಸಪೇಟೆ ಕಡೆಗೆ ಸಂಚರಿಸುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಫ್ಲೈಓವರ್ ನಿಂದ ಕೆಳಗೆ ಬಿದ್ದಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಟ್ರಕ್ ನಲ್ಲಿ ಸಿಲುಕಿದ್ದ ಚಾಲಕನ ರಕ್ಷಿಸಿದ್ದಾರೆ. ಟ್ರಕ್ ನಲ್ಲಿದ್ದ ಮತ್ತೋರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪಿಐ ಬಾಲಚಂದ್ರ ನಾಯ್ಕ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಗಾಯಾಳು ಚಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ : ಮಹಾರಾಷ್ಟ್ರ ಬಳಿ ಭೀಕರ ಅಪಘಾತ : ಕಲಬುರಗಿ ಜಿಲ್ಲೆಯ 7 ಮಂದಿ ದುರ್ಮರಣ

ಎಣ್ಣೆ ಏಟಲ್ಲಿ ಐಸರ್‌ಗೆ ಡಿಕ್ಕಿ

ಕುಡಿದ ಮತ್ತಿನಲ್ಲಿ ಬೈಕ್ ಸವಾರರು ಐಸರ್‌ಗೆ ಗುದ್ದಿರುವ ಘಟನೆ ಬೆಳಗಾವಿಯ ಚಿಕ್ಕೋಡಿ ತಾಲೂಕಿನ‌ ಬೆಳಕೂಡ ಗೇಟ್‌ ಬಳಿಯ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಬೈಕ್ ನಲ್ಲಿದ್ದ ಮೂವರಿಗೂ ಗಂಭೀರ ಗಾಯಗಳಾಗಿವೆ. ಗಾಯಾಳುಗಳಾದ ಮುಲ್ತಾನಿ, ದಸ್ತಗೀರ್ ಮುಲ್ತಾ,ನಿ ಶ್ರೀಕಾಂತ್ ಎಂಬುವವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಈ ಸಂಬಂಧ ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version