Site icon PowerTV

ಧಾರಾಕಾರ ಮಳೆಗೆ ತತ್ತರಿಸಿದ ದಕ್ಷಿಣ ಕನ್ನಡ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ : ಬೀಕರ ಮಳೆಗೆ ತತ್ತರಿಸಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧ್ಯಾರ್ಥಿಗಳ ಹಿತ ದೃಷ್ಟಿಯಿಂದ ಮುಂಜಾಗ್ರತವಾಗಿ ನಾಳೆಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ನಿರ್ಧಾರವನ್ನು ಜಿಲ್ಲಾಡಳಿತ ತೆಗೆದುಕೊಂಡಿದೆ.

ಈ ಕುರಿತು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳ ಮುಖ್ಯೋಪಾಧ್ಯಾಯರಿಗೆ ಸೂಚಿಸಿರುವ ಜಿಲ್ಲಾಧಿಕಾರಿಗಳು ಪ್ರಕೃತಿ ವಿಕೋಪವನ್ನು ಎದುರಿಸಲು ಸಿದ್ದವಾಗಿರಲು ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ಕರಾವಳಿಗೆ ಎಂಟ್ರಿ ಕೊಟ್ಟಿರುವ ವರುಣನ ಅಬ್ಬರದಿಂದ ದಕ್ಷುಣ ಕನ್ನಡ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಯಲ್ಲಿ ನೀರು ನಿಂತು ವಾಹನಗಳು ನೀರಿನಲ್ಲಿ ತೇಲುವ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರು ಎಚ್ಚರ ವಹಿಸಲು ಜಿಲ್ಲಾಡಳಿತ ತಿಳಿಸಿದೆ.

Exit mobile version