Site icon PowerTV

ಯುವಕನ ಕಿರುಕುಳಕ್ಕೆ ಬೇಸತ್ತ ಯುವತಿ; ವಿಷ ಸೇವಿಸಿ ಆತ್ಮಹತ್ಯೆ

ಮೈಸೂರು: ಯುವಕನ ಕಿರುಕುಳಕ್ಕೆ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು ಘಟನೆ ಮೈಸೂರು ಜಿಲ್ಲೆಯ ಗಣಗರಹುಂಡಿ ಗ್ರಾಮದಲ್ಲಿ ನಡೆದಿದೆ.

ಹರ್ಷಿತಾ (21) ಮೃತ ದುರ್ದೈವಿ. ಅದೇ ಗ್ರಾಮದ ಶಿವು( 26) ಎಂಬಾತ ಪ್ರೀತಿಸುವಂತೆ ಹಿಂದೆ ಬಿದ್ದ ಯುವಕನ ಕಿರುಕುಳಕ್ಕೆ ಬೇಸತ್ತ ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗುವ ಸಾಧ್ಯತೆ

ಘಟನೆಯ ಹಿನ್ನೆಲೆ:

ಪಿಯುಸಿ ಓದಿದ್ದ ಹರ್ಷಿತಾ ಇತ್ತೀಚೆಗೆ ಕಂಪ್ಯೂಟರ್ ಕ್ಲಾಸ್ ಗೆ  ಸೇರಿಕೊಂಡಿದ್ದಳು. ಇದೇ ವೇಳೆ ಶಿವು  ಆಕೆಯ ಹಿಂದೆ ಬಿದ್ದು ಪ್ರೀತಸುವಂತೆ ಪೀಡಿಸುತ್ತಿದ್ದ ಆದರೇ ಶಿವು ಮನವಿಯನ್ನ ಹರ್ಷಿತಾ ತಿರಸ್ಕರಿಸುತ್ತಿದ್ದಳು.

ಈ ಮಧ್ಯೆ ಹರ್ಷಿತಾ ಮನೆಯವರು ಆಕೆಯ ಮದುವೆಗೆ ಹುಡುಗನ್ನು ನೋಡಿದ್ದು ಆಷಾಢ ಮಾಸದ ನಂತರ ಮದುವೆ ದಿನಾಂಕ ನಿಗಧಿಪಡಿಸಲು ನಿರ್ಧರಿಸಿದ್ದರು. ಈ ಮಾಹಿತಿ ಅರಿತ ಶಿವು ತನ್ನನ್ನ ಪ್ರೀತಿಸಿ ಮದುವೆ ಆಗುವಂತೆ ದುಂಬಾಲು ಬಿದಿದ್ದ. ಈತನ ಕಿರುಕುಳಕ್ಕೆ ಬೇಸತ್ತ ಹರ್ಷಿತ ಹುಳುಗಳಿಗಾಗಿ ಇಟ್ಟಿದ್ದ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಹರ್ಷಿತಾಳನ್ನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಮಗಳ ಸಾವಿಗೆ ಶಿವು ಕಾರಣ ಎಂದು ಹರ್ಷಿತಾ ತಂದೆ ವೇಣುಗೋಪಾಲ್ ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಶಿವು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Exit mobile version