Site icon PowerTV

ಭಾರೀ ಮಳೆ : ಈ ಜಿಲ್ಲೆಗಳಲ್ಲಿ ನಾಳೆ ಶಾಲೆ-ಕಾಲೇಜಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ : ಕರಾವಳಿಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್ ಅಲರ್ಟ್​​ ಘೋಷಣೆ ಮಾಡಿದೆ.

ಮಳೆ ಪರಿಸ್ಥಿತಿ ನೋಡಿಕೊಂಡು ಆಯಾ ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲು ಅಧಿಕಾರ ನೀಡಿ ಉಡುಪಿ ಜಿಲ್ಲಾಧಿಕಾರಿ ಡಾ.ಕೂರ್ಮರಾವ್ ಆದೇಶಿಸಿದ್ದಾರೆ.

ಕರಾವಳಿಯಲ್ಲಿ ಜುಲೈ 5ರ ವರೆಗೆ ರೆಡ್ ಅಲರ್ಟ್ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ, ಅನುದಾನಿತ, ಸರ್ಕಾರಿ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ. ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳು ಅಲರ್ಟ್ ಇರುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಭಾರೀ ಮಳೆ ಸಾಧ್ಯತೆ : ರಾಜ್ಯದ ಈ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಆರೆಂಜ್ ಅಲರ್ಟ್​​ ಘೋಷಣೆ

ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತಯ್ತಿದ್ದು, 3 ದಿನ ಆರೆಂಜ್ ಅಲರ್ಟ್​​ ಘೋಷಣೆ ಮಾಡಲಾಗಿದೆ. ಎನ್.ಆರ್ ಪುರ ಪಟ್ಟಣ, ಶೃಂಗೇರಿ ,ಕೊಪ್ಪ ,ಮೂಡಿಗೆರೆ, ಕಳಸ‌ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ.

ಮುಳ್ಳಯ್ಯನಗಿರಿ, ದತ್ತಪೀಠ ಗಿರಿ ಶ್ರೇಣಿ ಸಾಲಿನಲ್ಲಿ ವರುಣಾರ್ಭಟ ಶುರುವಾಗಿದೆ. ಮುಂದಿನ 3 ದಿನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Exit mobile version