Site icon PowerTV

ಕರಾವಳಿಯಲ್ಲಿ ಧಾರಾಕಾರ ಮಳೆ : ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಹವಾಮಾನ ಇಲಾಖೆಯು ಕರಾವಳಿಯಲ್ಲಿ ರೆಡ್ ಅಲರ್ಟ್‌ ಘೋಷಿಸಿದ್ದು ಮುಂದಿನ 24ಗಂಟೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ &ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ನಿನ್ನೆಯೂ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇದನ್ನೂ ಓದಿ: ಭಾರೀ ಮಳೆ : ಈ ಜಿಲ್ಲೆಗಳಲ್ಲಿ ನಾಳೆ ಶಾಲೆ-ಕಾಲೇಜಿಗೆ ರಜೆ ಘೋಷಣೆ

ಆರೆಂಜ್‌ ಅಲರ್ಟ್‌

ಇಂದು ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಕೊಡಗು, ಮೈಸೂರು &ಹಾಸನ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ಅನ್ನು ಹವಮಾನ ಇಲಾಖೆ ಸೂಚನೆ ನೀಡಿದೆ.

ರೆಡ್‌ ಅಲರ್ಟ್‌  

ವಿಜಯಪುರ, ಗದಗ, ಕೊಪ್ಪಳ, ಧಾರವಾಡ, ಹಾವೇರಿ, ದಾವಣಗೆರೆ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಣೆ ನೀಡಲಾಗಿದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಕೆಲವೆಡೆ 20 ಸೆಂ.ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ‘ರೆಡ್‌ ಅಲರ್ಟ್‌’ ಘೋಷಣೆ ಮಾಡಲಾಗಿದೆ.

 

 

Exit mobile version