ಕನಕಪುರಕ್ಕೆ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಬಜೆಟ್​​ನಲ್ಲಿ ಅಸ್ತು

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಅಧಿವೇಶನದಲ್ಲಿ  ಕನಕಪುರಕ್ಕೆ ಹೊಸ ವೈದಕೀಯ ಕಾಲೇಜು ನಿರ್ಮಾಣ ಮಾಡಲು  ಸಿಎಮ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ.

ಹೌದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಅವರ ಕನಸಾಗಿದ್ದ ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ನನಸಾಗಿದೆ.

ಇದನ್ನೂ ಓದಿ: ಪ್ರೌಢಶಾಲಾ ಮಕ್ಕಳಿಗೆ ಇನ್ನುಮುಂದೆ ಮೊಟ್ಟೆ ಭಾಗ್ಯ

2023-24ನೇ ಸಾಲಿನ ಬಜೆಟ್ (​Karnataka Budget 2023) ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ (Kanakapura) ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

 

RELATED ARTICLES

Related Articles

TRENDING ARTICLES