karnataka Budget 2023: ಸಿದ್ದರಾಮಯ್ಯ ದಾಖಲೆಯ ಬಜೆಟ್ ನಿರೀಕ್ಷೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು  ಮಂಡಿಸಲಿದ್ದಾರೆ. ಹಣಕಾಸು ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಮಂಡಿಸುತ್ತಿರುವ ಬಜೆಟ್ ಇದಾಗಿದೆ.

5 ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಒತ್ತಡ, ಎತ್ತಿನಹೊಳೆ, ಮೇಕೆದಾಟು, ಕೃಷ್ಣಾ-ಭದ್ರಾ ಮೇಲ್ದಂಡೆಯಂಥಹ ಬೃಹತ್ ಯೋಜನೆಗಳಿಗೆ ಹಣ ಮೀಸಲಿಡುವ ಅನಿವಾರ್ಯತೆ. ಸಿಬ್ಬಂದಿ ವೇತನ ಹೆಚ್ಚಳ, ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆ, ಭಾರೀ ಮೊತ್ತದ ಸಾಲಕ್ಕೆ ಕಡಿವಾಣ ಹಾಕುವುದು ಸೇರಿ ಸಾಲು-ಸಾಲು ಸವಾಲುಗಳ ನಡುವೆ ಈ ಸರ್ಕಾರದ ಬಜೆಟ್ ಮಂಡನೆಗೆ ಸಿದ್ದರಾಮಯ್ಯ ಅಣಿಯಾಗಿದ್ದಾರೆ. ಹಾಗದ್ರೆ ಈ ಬಾರಿಯ ಬಜೆಟ್​ ಮೇಲೆ ರಾಜ್ಯದ ಜನರಿಗೆ ಬಾರಿ ನಿರೀಕ್ಷಗಳಿವೆ.

ಇದನ್ನೂ ಓದಿ: ಕರ್ನಾಟಕ ಇತಿಹಾಸದಲ್ಲಿ ಹೊಸ ದಾಖಲೆ ಬರೆಯಲು ಸಿಎಂ ಸಿದ್ದರಾಮಯ್ಯ ಸಿದ್ಧ

ಸಿದ್ದರಾಮಯ್ಯ ಬಜೆಟ್ ನಿರೀಕ್ಷೆಗಳೇನು?

  •  ಸಮಾಜದ ಎಲ್ಲಾ ವರ್ಗಗಳನ್ನ ಗಮನದಲ್ಲಿಟ್ಟುಕೊಂಡು ಬಜೆಟ್
  • ರೈತರು, ಕೂಲಿ ಕಾರ್ಮಿಕರು, ಕೈಗಾರಿಕೋದ್ಯಮಿಗಳು, ನೇಕಾರರು, ರೇಷ್ಮೆ ಬೆಳಗಾರರು ಸೇರಿದಂತೆ ಹಲ ವರ್ಗಗಳಿಗೆ ಅನುಕೂಲ
  • ಮಹಿಳೆಯರು, ಮಕ್ಕಳು, ಯುವಕರು, ಯುವತಿಯರು, ವಯೋವೃದ್ಧರಿಗೆ ಯೋಜನೆಗಳು ಇಂದಿರಾ ಕ್ಯಾಂಟೀನ್ ಗೆ ಅನುದಾನ
  •  ಅಲ್ಪಸಂಖ್ಯಾತ ಇಲಾಖೆಗೆ ಹೆಚ್ಚಿನ ಅನುದಾನ ಬರ ನಿರ್ವಹಣೆ, ಕುಡಿಯುವ ನೀರಿಗೆ ಹೆಚ್ಚಿನ ಅನುದಾನ
  • ಬೆಂಗಳೂರು ಮೂಲಸೌಕರ್ಯಕ್ಕೆ ಹೆಚ್ಚಿನ ಅನುದಾನ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ

ಕರ್ನಾಟಕದ 2023-24ನೇ ಸಾಲಿನ ಬಜೆಟ್‌ ಮಂಡನೆಗೆ ಇನ್ನೊಂದು ದಿನ ಬಾಕಿ ಇದೆ. ಈ ನಡುವೆ ರಾಜ್ಯದ ವಿವಿಧ ಭಾಗಗಳ ಜನ ಸಿಎಂ ಸಿದ್ದರಾಮಯ್ಯನವರ ಬಜೆಟ್‌ ಮೇಲೆ ಅಪಾರ ನಿರೀಕ್ಷೆಗಳನ್ನು ಇರಿಸಿಕೊಂಡಿದ್ದಾರೆ.

 

 

 

 

 

 

 

RELATED ARTICLES

Related Articles

TRENDING ARTICLES