Site icon PowerTV

ಸಿಎಂ ಸಿದ್ದುಗೆ ಅನಾರೋಗ್ಯ: ಇಂದಿನ ಬಹುತೇಕ ಕಾರ್ಯಕ್ರಮಗಳು ರದ್ದು!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಸಮಸ್ಯೆ ಹಿನ್ನೆಲೆ ಇಂದಿನ ಬಹುತೇಕ ಕಾರ್ಯಕ್ರಮಗಳು ರದ್ದಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬಿಬಿಎಂಪಿ ಜನತೆಗೆ ನೀರಿನ ದರ ಏರಿಕೆ ಶಾಕ್!

ಅನಾರೋಗ್ಯದ ನಡುವೆಯೇ 2023-24ನೇ ಸಾಲಿನ ಸುಧೀರ್ಘ  ರಾಜ್ಯ ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಶೀತ ಮತ್ತು ಗಂಟಲು ನೋವಿನಿಂದ ಬಳಲುತ್ತಿದ್ದು ತಮ್ಮನ್ನು ಭೇಟಿಯಾಗಲು ಬಂದಿದ್ದ ಅಧಿಕಾರಿಗಳನ್ನು ವಾಪಾಸ್ ಕಳಿಸಿದ್ದಾರೆ,

ಸಿಎಂ ನಿವಾಸಕ್ಕೆ ಆಗಮಿಸಿದ ಸರ್ಕಾರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಿಎಂ ಪ್ರಧಾನ  ಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿಪಿ ಅಲೋಕ್ ಮೋಹನ್, ಇಂಟಲಿಜೆನ್ಸ್ ಎಡಿಜಿಪಿ ಶರತ್ ಚಂದ್ರ ಕೆಲಕಾಲ ಕಾದು ಕುಳಿತು ವಾಪಾಸ್ಸಾಗಿದ್ದಾರೆ.

ಬಳಿಕ ಬಂದ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾಮಾ ಹರೀಶ್, ಸುಂದರ್ ರಾಜ್ ಸೇರಿದಂತೆ ಪದಾಧಿಕಾರಿಗ ಕೂಡು ಸಿದ್ದರಾಮಯ್ಯ ಅನಾರೋಗ್ಯದ ಕಾರಣ ವಾಪಸಾಗಿದ್ದಾರೆ ಎನ್ನಲಾಗಿದೆ.

Exit mobile version