Site icon PowerTV

ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್‌ : ಒಂದು ತಿಂಗಳು ಸಂಚಾರ ಸ್ಥಗಿತ

ಬೆಂಗಳೂರುನಮ್ಮ ಮೆಟ್ರೋ  ಪ್ರಯಾಣಿಕರಿಗೆ BMRCL ಬಿಗ್​ ಶಾಕ್​ ಕೊಟ್ಟಿದೆ.

ಹೌದು, ಬೆಂಗಳೂರು ನೇರಳೆ ಮಾರ್ಗದಲ್ಲಿನ ಬೈಯಪ್ಪನಹಳ್ಳಿ, ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳನ್ನು ಸಂಪರ್ಕವನ್ನು ಕಲ್ಪಿಸಲು ಸಿಗ್ನಲಿಂಗ್ ಹಾಗೂ ಇತರ ಸಂಬಂಧಿತ ಕಾಮಗಾರಿ ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳು ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರವನ್ನು ಸ್ಥಗಿತ ಮಾಡಿದೆ.

ಜುಲೈ 10ರಿಂದ ಆಗಸ್ಟ್​ 09ರವರೆಗೆ ಬೈಯಪ್ಪನಹಳ್ಳಿಯಿಂದ   ಎಸ್.ವಿ. ರಸ್ತೆ ಹಾಗೂ ಕೃಷ್ಣರಾಜಪುರ- ವೈಟ್‌ಫೀಲ್ಡ್ ಮಾರ್ಗಗಳ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತ ಮಾಡಲಾಗುತ್ತಿದೆ.

ಇದನ್ನೂ ಓದಿ: ವಿಪಕ್ಷ ನಾಯಕ ಸ್ಥಾನಕ್ಕೆ ಹೊಸಮುಖದ ಸುಳಿವು ನೀಡಿದ್ರಾ ಸಿ.ಟಿ ರವಿ?

ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ

 ಮೆಟ್ರೋ ಸೇವೆಯನ್ನ ಬೆಳಗ್ಗೆ 2 ಗಂಟೆಗಳ ಕಾಲ ಮಾತ್ರ ಸ್ಥಗಿತ ಮಾಡಲಾಗಿದ್ದು, ನೇರಳೆ ಮಾರ್ಗದ ಕೆಲವು ನಿಲ್ದಾಣಗಳಲ್ಲಿ ರೈಲು ಸಂಚಾರ ಸ್ಥಗಿತವಾಗಲಿದೆ.

ದಿನಾಂಕ 10.07.2023 ಸೋಮವಾರದಿಂದ 09.08.2023 ಬುಧವಾರದವರೆಗೆ ಬೆಳಿಗ್ಗೆ 5 ಗಂಟೆಯಿಂದ 7 ಗಂಟೆವರೆಗೆ ಮಾತ್ರ  ಸೇವೆಯನ್ನು ಬಂದ್ ಮಾಡಲಾಗಿದೆ. ಬೈಯಪ್ಪನಹಳ್ಳಿ ಮತ್ತು ಎಸ್.ವಿ ರಸ್ತೆ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ ನಿಲ್ದಾಣಗಳ ನಡುವೆಯ ಮೆಟ್ರೋ ರೈಲು ಸೇವೆ ಸ್ಥಗಿತಗೊಳಿಸಲಾಗುತ್ತದೆ.

ವೈಟ್ಫೀಲ್ಡ್ ನಡುವೆ ಮೆಟ್ರೋ ಸಂಚಾರ ಸ್ಥಗಿತ

ಬೆಳಿಗ್ಗೆ 7.00 ಗಂಟೆಯ ನಂತರ, ಬೈಯಪ್ಪನಹಳ್ಳಿ ಮತ್ತು ಕೆಂಗೇರಿ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ ನ ಮೆಟ್ರೋ ನಿಲ್ದಾಣಗಳ ನಡುವೆ ವಾಣಿಜ್ಯ ರೈಲು ಸೇವೆಗಳು ಎಂದಿನಂತೆ ರಾತ್ರಿ 11.00 ಗಂಟೆಯವರೆಗೆ ಲಭ್ಯವಿರುತ್ತವೆ

ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆ ಉಂಟಾಗಲಿದ್ದುಮ ಸಹಕರಿಸಬೇಕು ಎಂದು ಬೆಂಗಳೂರು ಮೆಟ್ರೋ ರೈಲ್‌ ಕಾರ್ಪರೇಷನ್‌ ಲಿ (ಬಿಎಂಆರ್‌ಸಿಎಲ್‌) ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

 

Exit mobile version