Site icon PowerTV

ತಾತನಾದ ಸಂಭ್ರಮದಲ್ಲಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾತನಾಗಿ ಬಡ್ತಿ ಪಡೆದಿದ್ದಾರೆ.

ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ತಾತನಾಗಿರುವ ಖುಷಿಯನ್ನು ಟ್ವಿಟರ್ ನಲ್ಲಿ ಬಸವರಾಜ್ ಬೊಮ್ಮಾಯಿ ಹಂಚಿಕೊಂಡಿದ್ದಾರೆ. ಅಲ್ಲದೆ, ಮಗುವಿನ ವೀಡಿಯೋ ಶೇರ್ ಮಾಡಿ ಮಗ ಹಾಗೂ ಸೊಸೆಗೆ ಅಭಿನಂದನೆ ತಿಳಿಸಿದ್ದಾರೆ.

ಮನೆಗೆ ಹೊಸ ಅತಿಥಿಯೊಬ್ಬರ ಆಗಮನ ಹಿನ್ನಲೆ ಬೊಮ್ಮಾಯಿ ಕುಟುಂಬದಲ್ಲಿ ಸಂತೋಷ ತುಂಬಿದೆ. ಮೊಮ್ಮಗನನ್ನು ಕಂಡ ಬಸವರಾಜ ಬೊಮ್ಮಾಯಿ ಅವರು ಸಂತಸದಲ್ಲಿದ್ದಾರೆ.

Exit mobile version