Tuesday, August 26, 2025
Google search engine
HomeUncategorizedವಿಧಾನಸಭೆಯ ಭವ್ಯ ಪರಂಪರೆಗೆ ಕಪ್ಪು ಚುಕ್ಕೆ ಅಂಟಿದೆ : ಪ್ರಿಯಾಂಕ್ ಖರ್ಗೆ

ವಿಧಾನಸಭೆಯ ಭವ್ಯ ಪರಂಪರೆಗೆ ಕಪ್ಪು ಚುಕ್ಕೆ ಅಂಟಿದೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ವಿಧಾನಸಭೆಯ ಭವ್ಯ ಪರಂಪರೆಗೆ ಮೊದಲ ಬಾರಿ ಕಪ್ಪು ಚುಕ್ಕೆ ಅಂಟಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ವಿಧಾನಸಭೆ ಅಧಿವೇಶನ ಪ್ರಾರಂಭವಾಗಿ ಒಂದು ವಾರ ಕಳೆದರೂ ವಿಪಕ್ಷ ನಾಯಕನ ನೇಮಕವಾಗದ ಹಿನ್ನೆಲೆ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ.

ವಿರೋಧ ಪಕ್ಷದ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ ಆಯಿತು. ಬಜೆಟ್ ಮಂಡನೆಯಾಯ್ತು. ಸದನ ಶುರುವಾಗಿ ಒಂದು ವಾರಕ್ಕೂ ಹೆಚ್ಚು ದಿನಗಳಾದವು. ಕರ್ನಾಟಕದ ವಿಧಾನಸಭೆಯ ಭವ್ಯ ಪರಂಪರೆಗೆ ಮೊದಲ ಬಾರಿ ಇಂತಹದ್ದೊಂದು ಕಪ್ಪು ಚುಕ್ಕೆ ಅಂಟಿದೆ ಎಂದು ಕುಟುಕಿದ್ದಾರೆ.

ಇದನ್ನೂ ಓದಿ : ನಿಮ್ಮ ತಟ್ಟೇಲಿ ಹೆಗ್ಗಣ ಬಿದ್ದಿದೆ, ಮೊದಲು ಅದನ್ನು ನೋಡಿ : ಆರ್. ಅಶೋಕ್

ಜನರಲ್ಲಿ ಅಪನಂಬಿಕೆ ಮೂಡಿಸುತ್ತಿದೆ

ವಿಪಕ್ಷ ನಾಯಕನನ್ನು ನೇಮಿಸದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತಂದಿದೆ. ಕರ್ನಾಟಕದ ಜನತೆಗೆ, ಸದನದ ಪಾವಿತ್ರ್ಯತೆಗೆ ಅವಮಾನಕರವಾಗಿ ನಡೆದುಕೊಂಡು ರಾಜಕೀಯ ವ್ಯವಸ್ಥೆಯ ಮೇಲೆ ಜನರಲ್ಲಿ ಅಪನಂಬಿಕೆ ಮೂಡಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಆಡಳಿತ ಪಕ್ಷವಾಗಿ ಮಾತ್ರವಲ್ಲ, ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ ಎಂದು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಚಾಟಿ ಬೀಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments