Site icon PowerTV

ಜೈನಮುನಿ ಭೀಕರ ಹತ್ಯೆ ಪ್ರಕರಣ : ಪೊಲೀಸ್​ ಕಸ್ಟಡಿಗೆ ಆರೋಪಿಗಳು!  

ಬೆಳಗಾವಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಭಂದಿಸಿದ ಇಬ್ಬರು ಪ್ರಮುಖ ಆರೋಪಿಗಳನ್ನು ಇಂದು ಚಿಕ್ಕೋಡಿ ಪೊಲೀಸರು ವಶಕ್ಕೆ ಪಡೆದಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ : ಪರಾಜಿತ ಅಭ್ಯರ್ಥಿಗಳಿಗೆ ಹೊಸ ಟಾಸ್ಕ್​ ಕೊಟ್ಟ ಡಿಕೆಶಿ

ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ಎ1 ಆರೋಪಿ ನಾರಾಯಣ ಮಾಳಿ, ಎ2 ಆರೋಪಿ ಹಸನ್ ದಲಾಯತ ರನ್ನು ಚಿಕ್ಕೋಡಿ ಡಿವೈಎಸ್ಪಿ ಬಸವರಾಜ್ ಯಲಿಗಾರ, ಸಿಪಿಐ ಆರ್.ಆರ್.ಪಾಟೀಲ್ ತಂಡ ಆರೋಪಿಗಳಿಗೆ ಚಿಕ್ಕೋಡಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.

ಇಂದಿನಿಂದ ವಿಚಾರಣೆ ‌ಆರಂಭವಾಗಲಿದ್ದು ಬಂಧಿತ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೇಳಲಿದ್ದಾರೆ.

 

Exit mobile version