Site icon PowerTV

ತನಿಖೆಗೂ ಮೊದಲು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಲಿ : ಬಿ.ವೈ ರಾಘವೇಂದ್ರ

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ಕಾಂಗ್ರೆಸ್ ಸರ್ಕಾರ ಹೇಳುತ್ತಿದೆ. ಮಾಡಲಿ ಬೇಡ ಎಂದವರ್ಯಾರು ಎಂದು ಸಂಸದ ಬಿ.ವೈ. ರಾಘವೇಂದ್ರ ತಿರುಗೇಟು ನೀಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆಗೂ ಮೊದಲು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಲಿ. ಅಲ್ಲಿ ಆಗಿರುವ ಕಾಮಗಾರಿಗಳನ್ನು ಕಣ್ಣಾರೆ ನೋಡಲಿ ಎಂದು ಹೇಳಿದ್ದಾರೆ.

ಕಾಂಗ್ರೆಸ್‍ನ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರ ಬಗ್ಗೆ ನನಗೆ ಗೌರವ ಇದೆ. ಆದರೆ, ಅವರು ಎಂದೂ ವಿಮಾನ ನಿಲ್ದಾಣಕ್ಕೆ ಭೇಟಿ ನೀಡದೆ ಆರೋಪಿಸುತ್ತಿದ್ದಾರೆ. ವಾಸ್ತವ ಕೂಡ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಹೆಚ್​ಎಲ್​ ವಿಮಾನ ನಿಲ್ದಾಣದಲ್ಲಿ ಮುಗಚಿಬಿದ್ದ ವಿಮಾನ

ಅಂತರಾಷ್ಟ್ರೀಯ ಗುಣಮಟ್ಟವಿದೆ

ಅತ್ಯಂತ ಕಡಿಮೆ ವೆಚ್ಚದಲ್ಲಿ ನಿರ್ಮಾಣವಾದ ಹೆಚ್ಚು ಗುಣಮಟ್ಟದ ವಿಮಾನ ನಿಲ್ದಾಣ ಇದಾಗಿದೆ.  ವಿಮಾನ ನಿಲ್ದಾಣದ ಅಂದಾಜು ವೆಚ್ಚ ಆರಂಭದಲ್ಲಿ ಕಡಿಮೆ ಇತ್ತು ನಿಜ. ಆದರೆ, ಬರಬರುತ್ತಾ ಅದರ ವಿನ್ಯಾಸ, ಒಳ್ಳೆಯ ಸೌಲಭ್ಯ, ಅಂತರಾಷ್ಟ್ರೀಯ ಗುಣಮಟ್ಟವಿದೆ. ಹಾಗಾಗಿಯೇ ಸಹಜವಾಗಿಯೇ ವೆಚ್ಚ ಹೆಚ್ಚಾಗಿದೆ ಎಂದರು.

ಇಡೀ ರಾಜ್ಯದಲ್ಲಿಯೇ ಅದು 2ನೇ ದೊಡ್ಡ ನಿಲ್ದಾಣವಾಗಿದೆ. ಯಾವ ಮಾಹಿತಿ ಇಲ್ಲದೆ ಈ ರೀತಿ ಆರೋಪ ಮಾಡುವುದು ಸರಿಯಲ್ಲ. ಆದರೆ, ತನಿಖೆ ಮಾಡಲಿ ಎಂದು ರಾಘವೇಂದ್ರ ಹೇಳಿದ್ದಾರೆ.

Exit mobile version