Site icon PowerTV

ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ‘ಕೊಬ್ಬರಿ ಬೆಳೆಗಾರ’ರಿಗೆ ರಾಜ್ಯಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. 

ಹೌದು, ಬೆಂಬಲ ಬೆಲೆ ಯೋಜನೆಯ ಅಡಿಯಲ್ಲಿ ಕೊಬ್ಬರಿಯನ್ನು ಖರೀದಿಸುವ ದರದಲ್ಲಿ ರೂ. 1,250 ಹೆಚ್ಚಳವನ್ನು ರಾಜ್ಯ ಸರ್ಕಾರ ಮಾಡಿದೆ.ಇಂದಿನಿಂದಲೇ ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳವಾಗಲಿದೆ.

ಪ್ರತಿ ಕ್ಚಿಂಟಲ್​ ಉಂಡೆ ಕೊಬ್ಬರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ 11,750 ರೂ ಬೆಂಬಲ ಬೆಲೆಯ ಜೊತೆಗೆ ರಾಜ್ಯಸರ್ಕಾರವೂ ಪ್ರತಿ ಕ್ವಿಂಟಾಲ್​ಗೆ 1,250 ಪ್ರೋತ್ಸಾಹ ಧನ ನೀಡಲು ನಿರ್ಧರಿಸಿದೆ. ಇದರಿಂದಾಗಿ ರೈತರಿಗೆ ಕ್ವಿಂಟಾಲ್​ಗೆ 13,000 ಸಿಗಲಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಟೇಲ್​ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸದಸ್ಯರನ್ನು ಬಿಟ್ಟು ನನ್ನ ನೋಡಿ ಮಾತಾಡಿ : ಬಿಜೆಪಿ ಶಾಸಕನಿಗೆ ಖಾದರ್ ಕಿವಿಮಾತು

ಸಿವಾನಂದ ಪಾಟೀಲ ವಿಧಾನಸಭೆಯಲ್ಲಿ ಬುಧವಾರ ಗಮನಸಳೆಯುವ ಸೂಚನೆಗೆ ನೀಡಿದ ಉತ್ತರದಲ್ಲಿ ಈ ವಿಚಾರ ತಿಳಿಸಿದ್ದಾರೆ. ಈ ಕುರಿತು ಉತ್ತರ ನೀಡಿದ್ದಾರೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ 1,250 ರೂ. ಪ್ರೋತ್ಸಾಹತನ ನೀಡಿಲ್ಲ. 1000 ರೂ. ವರೆಗೆ ಪ್ರೋತ್ಸಾಹ ಧನ ನೀಡಲಾಗಿತ್ತು. ಇದೇ ಮೊದಲ ಬಾರಿಗೆ 1,250 ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಈ ಮೊದಲು ಬೆಂಬಲ ಬೆಲೆ ಯೋಜನೆ ಯಡಿ ಕೊಬ್ಬರಿ ಮಾರಾಟ ಮಾಡಿದವರಿಗೆ ಇದು ಅನ್ವಯವಾಗುವುದಿಲ್ಲ ಎಂದರು.

ಕೇಂದ್ರ ಸರ್ಕಾರ ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 11,750 ರೂ. ಬೆಂಬಲ ಬೆಲೆ ನಿಗದಿ ಮಾಡಿದ್ದು, ರಾಜ್ಯ ಸರ್ಕಾರ ಇದರೊಂದಿಗೆ 1,250 ರೂ. ಪ್ರೋತ್ಸಾಹ ಧನ ನೀಡಲಿದೆ. ಅವಧಿ ವಿಸ್ತರಣೆಗೆ ಅನುಮತಿ ನೀಡಿದ ನಂತರ ನೋಂದಾಯಿಸುವ ರೈತರಿಗೆ ಪ್ರೋತ್ಸಾಹ ಧನ ಸಿಗಲಿದೆ ಎಂದು ತಿಳಿಸಿದ್ದಾರೆ.

 

Exit mobile version