Site icon PowerTV

ತೋಟದ ಮನೆಗೆ ಹೋಗುತ್ತಿದ್ದ ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ!

ಹಾಸನ : ತೋಟದ ಮನೆಗೆ ಹೋಗುವಾಗ ರೈತನ ಮೇಲೆ ಕರಡಿಯೊಂದು ದಾಳಿ ಮಾಡಿರುವ ಘಟನೆ ಅರಸೀಕೆರೆ ತಾಲ್ಲಾಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ಭಾರತ್ ಜೋಡೋ ಬಿಜೆಪಿಗೆ ಭಯ ಹುಟ್ಟಿಸಿದೆ : ಸಚಿವ ಸಂತೋಷ್ ಲಾಡ್

ರೈತ ಶಿವಣ್ಣ ಕರಡಿ ದಾಳಿಗೊಳಗಾದ ವ್ಯಕ್ತಿ, ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ರಾತ್ರಿ 11.40ಕ್ಕೆ ಬೊಮ್ಮನಹಳ್ಳಿ ಗ್ರಾಮದಲ್ಲಿರುವ ತಮ್ಮ ತೋಟದ ಮನೆಗೆ ಹೋಗುವ ವೇಳೆ ಇದ್ದಕ್ಕಿದ್ದಂತೆ ಕರಡಿಯೊಂದು ದಾಳಿ ನಡೆಸಿದೆ, ಈ ವೇಳೆ ದಾಳಿಯಿಂದ ತಪ್ಪಿಸಿಕೊಂಡು ಗ್ರಾಮದತ್ತ ಓಡಿಬಂದ ಶಿವಣ್ಣನನ್ನು ಊರಿನ ಗ್ರಾಮಸ್ಥರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರ ಗಾಯಗಳಾಗಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಆತನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚೆಗೆ ಹಾಸನ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆ, ಚಿರತೆ ಬಳಿಕ ಈಗ ಕರಡಿಗಳು ಗ್ರಾಮಗಳತ್ತ ಬರುತ್ತಿದ್ದು ಗ್ರಾಮಸ್ಥರ ಮೇಲೆ  ದಾಳಿ ನಡೆಸಲು ಮುಂದಾಗುತ್ತಿವೆ. ಕಾಡಾನೆಗಳ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

Exit mobile version