Site icon PowerTV

6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಬಂಧನ

ಮೈಸೂರು : ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಬನ್ನೂರು ಪೋಲೀಸ್ ಬಂಧಿಸಿದ್ದಾರೆ.

ಸುರೇಶ್ (30) ಬಂಧಿತ ಆರೋಪಿ. ಮೈಸೂರು ಜಿಲ್ಲೆ ನರಸೀಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ  ಘಟನೆ ನಡೆದಿತ್ತು. ಆರೋಪಿ ಸುರೇಶ್, ಅಂಗಡಿಗೆ ಹೋಗುತ್ತಿದ್ದ 6 ವರ್ಷದ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ ಮಾಡಿದ್ದನು.

ಈ ವೇಳೆ ಬಾಲಕಿ ಕಿರುಚಾಟ ಕೇಳಿ ಸ್ಥಳೀಯರು ದೌಡಾಯಿಸಿದ್ದರು. ಬಾಲಕಿ ರಕ್ಷಣೆ ಮಾಡಿದ್ದರು. ಬಾಲಕಿಯ ತಾಯಿ ನೀಡಿರುವ ದೂರಿನ ಮೇರೆಗೆ  ಬನ್ನೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಇದೀಗ, ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : ವರದಕ್ಷಿಣೆ ಆಸೆಗೆ ಪತ್ನಿಯನ್ನೇ ಕೊಂದ ಪಾಪಿ ಪತಿ

ಕಾರು ಡಿಕ್ಕಿ, ಶಿಕ್ಷಕಿ ಸಾವು

ಕಾರು ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ ಆರ್ ಟಿಒ ಚೆಕ್ ಪೋಸ್ಟ್ ಬಳಿ ನಡೆದಿದೆ. ಸವಿತಾ ನಾಗಪ್ಪ ಸಗಾಯಿ (30) ಮೃತಪಟ್ಟ ಶಿಕ್ಷಕಿ.

ಇವರು ಝಳಕಿಯ ಗುರುಚಂದ್ರ ಶೇಖರ ಕಿವುಡು ಮತ್ತು ಮೂಕ ಮಕ್ಕಳ ಶಾಲಾ ಶಿಕ್ಷಕಿಯಾಗಿದ್ದರು. ನಿನ್ನೆ ಸಂಜೆ ಕಾರು ಡಿಕ್ಕಿ ಹೊಡೆದು ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಝಳಕಿ ಪೊಲೀಸ್ ಠಾಣೆಯಲ್ಲ ಪ್ರಕರಣ ದಾಖಲಾಗಿದೆ.

Exit mobile version