Site icon PowerTV

ಜೈನ ಮುನಿಗಳ ಆಸೆಯಂತೆ ಶಿಕ್ಷಣ ಸಂಸ್ಥೆ ಕಟ್ಟಲು ಸಹಾಯ : ಅಣ್ಣಾಸಾಹೇಬ ಜೊಲ್ಲೆ

ಬೆಳಗಾವಿ : ಜೈನ ಮುನಿಗಳ ಆಸೆಯಂತೆ ಶಿಕ್ಷಣ ಸಂಸ್ಥೆ ಕಟ್ಟಲು ವೈಯಕ್ತಿಕವಾಗಿ, ಪಕ್ಷದ ವತಿಯಿಂದಲೂ ಸಹಾಯ ಮಾಡ್ತೀವಿ ಎಂದು ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು.

ಚಿಕ್ಕೋಡಿಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಹಿರೇಕೋಡಿ ನಂದಿಪರ್ವತ ಆಶ್ರಮದ ಕಾಮಕುಮಾರ ಬರ್ಬರ ಹತ್ಯೆ ಆಘಾತ ಉಂಟು ಮಾಡಿದೆ. ಹಿರೇಕೋಡಿ ಎಂಬ ಸಣ್ಣ ಹಳ್ಳಿಯಲ್ಲಿ ಉತ್ತಮ ಆಶ್ರಮ ಕಟ್ಟಿ, ಶಿಕ್ಷಣ ಸಂಸ್ಥೆ ಮಾಡಿದ್ದರು. ಅವರು ಬಿಟ್ಟು ಹೋದ ಅರ್ಧ ಕನಸುಗಳನ್ನು ಪೂರ್ಣ ಮಾಡ್ತೀವಿ ಎಂದು ಹೇಳಿದರು.

ಇದನ್ನೂ ಓದಿ : ಜೈನ ಮುನಿಗಳ ಹತ್ಯೆ : ಮನಸ್ಸಿಗೆ ತುಂಬಾ ನೋವಾಗಿದೆ ಎಂದ ವೀರೇಂದ್ರ ಹೆಗ್ಗಡೆ

ಸಿಬಿಐ ತನಿಖೆಗೆ ಆಗ್ರಹ ಮಾಡ್ತೀವಿ

ಇಂತಹ ಘಟನೆ ಎಲ್ಲಿಯೂ ನಡೆಯಬಾರದು. ಎಲ್ಲ ಮುನಿಗಳಿಗೂ ಸರ್ಕಾರದಿಂದ ರಕ್ಷಣೆ ಇರಬೇಕು. ಪ್ರಕರಣದ ತನಿಖೆ ಸಿಬಿಐಗೆ ವಹಿಸಬೇಕೆಂದು ಆಗ್ರಹ ಮಾಡ್ತೀವಿ. ಪ್ರಕರಣದ ಸತ್ಯಾಂಶ ಹೊರಬರಬೇಕು ಎಂದು ಸಿಬಿಐ ತನಿಖೆಗೆ ಆಗ್ರಹ ಮಾಡ್ತಿದೀವಿ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು.

14 ಭಾಷೆಗಳಲ್ಲಿ ಪರಿಣಿತರಾಗಿದ್ದರು

ಕಾಮಕುಮಾರ ನಂದಿ ಮಹಾರಾಜರು 14 ಭಾಷೆಗಳಲ್ಲಿ ಪರಿಣಿತರಾಗಿದ್ದರು. ಬಿಇ ಪದವೀಧರ ಆಗಿದ್ದರು. ರಾಜ್ಯ ಪೊಲೀಸರು ಒಳ್ಳೆಯ ಕಾರ್ಯ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿ ಘಟನೆ ಆಗಬಾರದು, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಹೇಳಿದರು.

Exit mobile version