Site icon PowerTV

ಜೀವನದಲ್ಲಿ ಜಿಗುಪ್ಸೆ: ಪೊಲೀಸ್ ಪೇದೆ ನೇಣಿಗೆ ಶರಣು!

ಉಡುಪಿ: ಪೊಲೀಸ್ ಪೇದೆ ನೇಣಿಗೆ ಶರಣಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

ಇದನ್ಮಿನೂ ಓದಿ: ಪ್ರೀತಿಸಿದ ತಪ್ಪಿಗೆ ಯುವಕನಿಗೆ ಪೆಟ್ರೋಲ್ ಸುರಿದು ಬೆಂಕಿ!

ಯ್ಯಾರಿನ ನಿವಾಸಿ ಹೆಚ್.ಸಿ. ಪ್ರಶಾಂತ್ ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಪ್ರಶಾಂತ್ ಈ ಹಿಂದೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಹೆಡ್ ಕಾನ್​ಸ್ಟೇಬಲ್ ಆಗಿ ಸೇವೆ‌ ಸಲ್ಲಿಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಕಾರ್ಕಳ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಕರ್ತವ್ಯಕ್ಕೆ ಹಾಜರಾಗದೇ ರಜೆಯಲ್ಲಿದ್ದರು, ಇಂದು ಏಕಾಏಕಿ ಆತ್ಮಹತ್ಯೆ ಮಾಡುವ ನಿರ್ಧಾರ ಮಾಡಿದ್ದಾರೆ.

ಅವಿವಾಹಿತರಾಗಿದ್ದ ಪ್ರಶಾಂತ್ ಮಧುಮೇಹ ಹಾಗೂ ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಈ ಅನಾಹುತ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ.

Exit mobile version