Site icon PowerTV

ಕಾರ್ಮಿಕರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ

ಉಡುಪಿ : ಕಾರ್ಮಿಕರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಸೋಮವಾರ ಸಂಜೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ.

ಒರಿಸ್ಸಾ ಮೂಲದ ಗಣೇಶ್ (50) ಮೃತ ಕಾರ್ಮಿಕ. ಈತ ಕಟಪಾಡಿ ಶಿರ್ವ ರಸ್ತೆ ಬಳಿಯಲ್ಲಿ ಕಟ್ಟಡ ಕಾಮಗಾರಿ ನಿರ್ವಹಿಸುತ್ತಿದ್ದ. ಹತ್ಯೆಗೆ ಕಾರಣನಾದ ಕಾರ್ಮಿಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಕೆಲಸದ ವಿಷಯದಲ್ಲಿ ಇಬ್ಬರ ನಡುವೆ ಮಾತುಕತೆ, ಜಗಳ ನಡೆದಿದ್ದು ಬಳಿಕ ಇಬ್ಬರೂ ಹೊಡೆದಾಟ ನಡೆಸಿದ್ದರು. ಈ ವೇಳೆ ಗಣೇಶ್ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಮತ್ತು ಸಹಕಾರ್ಮಿಕರು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಉಡುಪಿ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಡಿವೈಎಸ್ಪಿ ಅರವಿಂದ ಕುಲಗುಜ್ಜಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ ಪೂವಯ್ಯ, ಎಸ್ಸೈ ಶ್ರೀಶೈಲ ಮುರಗೋಡ ಸೇರಿದಂತೆ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Exit mobile version