Site icon PowerTV

ಕಳೆದ ಬಾರಿಗಿಂತ ಈ ಬಾರಿ ರೈತರ ಆತ್ಮಹತ್ಯೆ ಸಂಖ್ಯೆ ಕಡಿಮೆ : ಚಲುವರಾಯಸ್ವಾಮಿ

ಬೆಂಗಳೂರು : ರೈತರ ಆತ್ಮಹತ್ಯೆ ತಡೆಗೆ ಕಾಂಗ್ರೆಸ್ ಸರ್ಕಾರ ಕ್ರಮಕೈಗೊಂಡಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.​ಡಿ ಕುಮಾರಸ್ವಾಮಿ ಆರೋಪಕ್ಕೆ ಕೃಷಿ ಸಚಿವ ಎನ್​. ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಗಿಂತ ಈ ಬಾರಿ ರೈತರ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ 6 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸುಳ್ಳು. ರೈತರ ಆತ್ಮಹತ್ಯೆ ಕೇಸ್​​ನಲ್ಲೂ ರಾಜಕಾರಣ ಬೆರೆಸುವುದು ಒಳ್ಳೆಯದಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ನಾನು ವಿಪಕ್ಷ ಸ್ಥಾನಕ್ಕೆ ಟವೆಲ್ ಹಾಕಿದ್ದೇನಂತೆ : ಹೆಚ್.ಡಿ ಕುಮಾರಸ್ವಾಮಿ

ಒಬ್ಬ ರೈತನ ಸಾವಿಗೂ ಬೆಲೆ ಇದೆ

ಹಾವೇರಿ ಜಿಲ್ಲೆಯಲ್ಲಿ ಮಳೆಯೂ ಜಾಸ್ತಿ ಆಗಿದ್ದು, ಶೇಕಡಾ 80ರಷ್ಟು ಬಿತ್ತನೆ ಕಾರ್ಯ ಆಗಿದೆ. ರಸಗೊಬ್ಬರ, ಬಿತ್ತನೆ ಬೀಜಕ್ಕೆ ಕೊರತೆ ಇಲ್ಲ, ಅಲ್ಲಿ ಗಲಾಟೆ ಆಗಿಲ್ಲ. ಒಬ್ಬ ರೈತನ ಸಾವಿಗೂ ಬೆಲೆ ಇದೆ, ಎಲ್ಲರ ಜೀವಕ್ಕೂ ಬೆಲೆ‌ ಇದೆ ಎಂದು ಸಚಿವ ಎನ್​. ಚಲುವರಾಯಸ್ವಾಮಿ ಹೇಳಿದ್ದಾರೆ.

ಕುಮಾರಸ್ವಾಮಿಯೂ ಮಾಡಬೇಕು

ಪಕ್ಷಾತೀತವಾಗಿ ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯೂ ಮಾಡಬೇಕು. ಹೆಚ್.ಡಿ ಕುಮಾರಸ್ವಾಮಿಯೂ ಮಾಡಬೇಕು ಎಂದರು. ಅಲ್ಲದೆ, ರೈತರ ಆತ್ಮಹತ್ಯೆ ಪ್ರಕರಣಗಳ ಅಂಕಿ ಅಂಶ ಬಿಡುಗಡೆ ಮೂಲಕ ಕುಮಾರಸ್ವಾಮಿಗೆ ತಿರುಗೇಟು ಕೊಟ್ಟಿದ್ದಾರೆ.

Exit mobile version