Site icon PowerTV

ಭದ್ರಕಾಳಿ ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು

ಯಾದಗಿರಿ : ಭದ್ರಕಾಳಿ ದೇವಸ್ಥಾನಕ್ಕೆ ಕಳ್ಳರು ಕನ್ನ ಹಾಕಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಕಾಳಬೆಳಗುಂದಿ ಗ್ರಾಮದಲ್ಲಿ ನಡೆದಿದೆ.

ತಡರಾತ್ರಿ ವೇಳೆ ಗ್ರಾಮದ ಭದ್ರಕಾಳಿ ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು, ಚಿನ್ನದ ಸರ, ಬೆಳ್ಳಿ ವಸ್ತುಗಳನ್ನು ದೋಚಿದ್ದಾರೆ.

ಭದ್ರಕಾಳಿ ದೇವರ ಮೈಮೇಲಿದ್ದ 12 ಗ್ರಾಂ ಚಿನ್ನದ ಬೋರಮಳ ಸರ ಹಾಗೂ ತಾಳಿ ಕಳವು ಮಾಡಿದ್ದಾರೆ. ಇದಲ್ಲದೆ, 45 ಗ್ರಾಂ ಬೆಳ್ಳಿಯ ಲೋಟ ಹಾಗೂ ಆರತಿ ತಟ್ಟೆಯನ್ನು ಕದ್ದೊಯ್ದಿದ್ದಾರೆ.

ಇದನ್ನು ಓದಿ : ಮಹಾಘಟಬಂದನ್ ಸಭೆ ಯಾವ ಕಾರಣಕ್ಕೆ ಅನ್ನೋದು ಅವರಿಗೆ ಗೊತ್ತಿಲ್ಲ : ಛಲವಾದಿ ನಾರಾಯಣಸ್ವಾಮಿ

ಈ ವಿಷಯ ತಿಳಿದ ಕೂಡಲೇ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸೈದಾಪುರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Exit mobile version