Site icon PowerTV

ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಧಾನಿ ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಹೌದು, ಮಾಧ್ಯಮಗಳೊಂದಿಗೆ ಶಂಕಿತರ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ 2 ತಿಂಗಳಿನಿಂದ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿದೆ ಎಂದರು.

 ಇದನ್ನೂ ಓದಿ: ಬೆಂಗಳೂರನ್ನು ಟಾರ್ಗೆಟ್ ಮಾಡಿರುವ ಉಗ್ರರ ಗುಂಪು

ಇನ್ನೂ ಉಗ್ರರ ಚಟುಚಟಿಕೆಗಳಿಗೆ ಕುಮ್ಮಕ್ಕು ನೀಡಲಾಗ್ತಿದೆ ಇದರ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಅಂತಾ ಸರ್ಕಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಒತ್ತಾಯಿಸಿದ್ದಾರೆ.ಬೆಂಗಳೂರಿನಲ್ಲಿ ಕ್ಲಬ್ ಚಟುವಟಿಕೆಗಳು ಹೆಚ್ಚಾಗಿದೆ, ಹಫ್ತಾ ವಸೂಲಿ ತೀವ್ರವಾಗುತ್ತಿದೆ ಎಂದು ಆರೋಪಿಸಿದರು.

Exit mobile version